ನವದೆಹಲಿ prajakiran.com : ಪ್ರಧಾನಿ ನರೇಂದ್ರ ಮೋದಿಅವರು ಸೋಮವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಲಾಕ ಡೌನ್ ಬಳಿಕ ಮೋದಿ 5ನೇ ಬಾರಿಗೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ವಿಶೇಷವಾಗಿ ಆರ್ಥಿಕ ಚಟುವಟಿಕೆ ಹಾಗೂ ಕರೋನಾ ನಿರ್ವಹಣೆ ಕುರಿತು ಚರ್ಚೆ ನಡೆಸಿದರು.
ಮಹಾರಾಷ್ಟ್ರ, ಪಂಜಾಬ, ಪಶ್ಚಿಮ ಬಂಗಾಳ, ಕೇರಳ ಸೇರಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಕೋವಿಡ್ ನಿಯಂತ್ರಣಕ್ಕಾಗಿ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿದರು.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾರ್ನಜಿ ಮಾತನಾಡಿ, ಕರೋನಾ ವಿರುದ್ದ ಹೋರಾಟಕ್ಕೆ ನಾವು ಸಂಪೂರ್ಣ ಸಹಕಾರ ನೀಡಿದ್ದೇವೆ.
ಆದರೆ ಕೇಂದ್ರ ಸರಕಾರ ಪಶ್ಚಿಮ ಬಂಗಾಳವನ್ನು ಬೇರೆ ರೀತಿಯಲ್ಲಿ ನೋಡಲಾಗುತ್ತಿದೆ. ಜೊತೆಗೆ ಒಕ್ಕೂಟ ವ್ಯವಸ್ಥೆಗೆ ಗೌರವ ನೀಡುತ್ತಿಲ್ಲ. ಇದು ಸರಿಯಾದ ಬೆಳವಣಿಗೆ ಅಲ್ಲ ಎಂದು ಗರಂ ಆದರು.
ತಮಿಳು ನಾಡು ಸರಕಾರ ರಾಜ್ಯಕ್ಕೆ 2 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿದರು.
ಕೇಂದ್ರ ಸರಕಾರಿ ನೌಕರರ ಸಂಬಳ ಕಡಿತ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದರು.
2-3 ದಿನಗಳಲ್ಲಿ ಕೇಂದ್ರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದುಕೇಂದ್ರ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, , ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಡಾ. ಹರ್ಷವರ್ಧನ ಸೇರಿ ಹಲವರು ಸಾಥ್ ನೀಡಿದರು.