ಹುಬ್ಬಳ್ಳಿ prajakiran.com : ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜ. 8ರಂದು ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವಲ್ಲಿ ಕಸಬಾಪೇಟ ಠಾಣೆ ಪೊಲೀಸರು 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 2,41,614 ರೂ. ಮೌಲ್ಯದ ಎರಡು ಐಫೋನ್ ಪ್ರೊ ಹಾಗೂ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್ಪೆಕ್ಟರ್ ಅಡೆಪ್ಪ ಬನ್ನಿ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದೆ. ತಂಡದ ಕಾರ್ಯವನ್ನು ಹು-ಧಾ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ. Share on: WhatsApp 60 SHARES […]
ಮುಂಡರಗಿ (ಗದಗ) prajakiran.com : 15 ಲಕ್ಷ ರೂಪಾಯಿಗೆ ಎರಡು ಕೆ ಜಿ ಚಿನ್ನ ಕೊಡುವುದಾಗಿ ವಂಚಿಸಿದ್ದ ಖದೀಮರು ಆ ಹಣವನ್ನು ಅರಣ್ಯ ಪ್ರದೇಶದಲ್ಲಿ ಹಣ ಹೂತಿಟ್ಟಿದ್ದರು ಎಂಬಅಂಶ ಪೊಲೀಸ್ ತನಿಖೆ ವೇಳೆ ಬಯಲಿಗೆ ಬಂದಿದೆ. ಆರೋಪಿಗಳು ಅಂದರ್ ಆಗಿದ್ದು, ಈ ಘಟನೆ ಗದಗ ಜಿಲ್ಲೆಯ ಮುಂಡರಗಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಕಡಿಮೆ ಬೆಲೆಗೆ ಚಿನ್ನ ಕೊಡುವುದಾಗಿ ನಂಬಿಸಿ ಪಡೆದ ಹಣವನ್ನು ಅರಣ್ಯ ಪ್ರದೇಶದಲ್ಲಿ ಆರೋಪಿಗಳು ಹೂತಿಟ್ಟಿದ್ದರು. ಬಂಧಿತರನ್ನು ದುರ್ಗಪ್ಪ, ಹನುಮಂತಪ್ಪ, […]
ಹುಬ್ಬಳ್ಳಿ-ಧಾರವಾಡ prajakiran. com : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಸ ಸಂಗ್ರಹಿಸುವ 9 ಟಿಪ್ಪರ್ ವಾಹನಗಳ ಬ್ಯಾಟರಿಗಳ ಕಳ್ಳತನ ಪ್ರಕರಣ ಭೇದಿಸುವಲ್ಲಿ ಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿಪ್ಪರ್ ಚಾಲಕ ಹನುಮಂತ ಕ್ಯಾರಕಟ್ಟಿಯೇ ಬಂಧಿತ ಆರೋಪಿ ಎಂಬುದು ಪೊಲೀಸ್ ತನಿಖೆಯಿಂದ ಬಯಲಿಗೆ ಬಂದಿದೆ. ಈ ವಾಹನವನ್ನು ಸ್ಟಾರ್ಟ್ ಮಾಡಲು ಹೋದಾಗ ಬ್ಯಾಟರಿ ಕಳ್ಳತನ ಆಗಿರೋದು ಬೆಳಕಿಗೆ ಬಂದಿದೆ ಎಂದು ಸಬೂಬು ಹೇಳಿ ಯಾಮಾರಿಸಿದ್ದ. ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಶಾಲೆಯ ಹತ್ತಿರುವ ಮಹಾನಗರ ಪಾಲಿಕೆಯ ವಲಯ ಕಛೇರಿ 11 […]