ಅಂತಾರಾಷ್ಟ್ರೀಯ

ಮೃತರ ಕುಟುಂಬಕ್ಕೆ ೫ ಲಕ್ಷ ಪರಿಹಾರ

ಮಂಡ್ಯ : ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ರಸ್ತೆ ದುರಂತಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಅಲ್ಲದೆ, ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದು, ಧೈರ್ಯ ಕಳೆದುಕೊಳ್ಳದಂತೆ ಮನವಿ ಮಾಡಿದ್ದಾರೆ.

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ಪರವಾಗಿ ೫ ಲಕ್ಷ ರೂಪಾಯಿ ಪರಿಹಾರ ನೀಡುವಾಗಿ ಘೋಷಿಸಿದ್ದಾರೆ.

ತುರ್ತಾಗಿ ಸರಕಾರದ ವತಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ, ಗಾಯಾಗಳುಗಳಿಗೆ ಅಗತ್ಯ ನೆರವು ನೀಡಲಾಗುತ್ತದೆ ಎಂದರು.

ಇದೇ ವೇಳೆ ಪವಾಡ ಸದೃಶವಾಗಿ ಪಾರಾಗಿ ಬಂದ ಬಾಲಕ ಲೋಹಿತ್ ನ ಆರೋಗ್ಯ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದರು.

ಘಟನಾ ಸ್ಥಳದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು, ಸಾರಿಗೆ ಡಿ.ಸಿ. ತಮ್ಮಣ್ಣ, ಜಿಲ್ಲೆಯ ಹಿರಿಯ ಅಧಿಕಾರಿಗಳು ಬಿಡಾರ ಹೂಡಿ ತೆರವು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಈವರೆಗೆ ೨೫ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನೇರಡು ಮೃತದೇಹವನ್ನು ಪತ್ತೆ ಹಚ್ಚಲಾಗಿದ್ದು, ಅವುಗಳ ತೆರವು ಕಾರ್ಯ ಕೂಡ ಸ್ತಳೀಯರು, ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ನೆರವಿನಿಂದ ಮುಂದುವರೆದಿದೆ.

Please follow and like us:

Leave a Reply

Your email address will not be published. Required fields are marked *