ಅಂತಾರಾಷ್ಟ್ರೀಯ

ಎನ್ ಕೌಂಟರ್ : ಆರು ಮಂದಿ ನಕ್ಸಲೀಯರ ಸಾವು, ಶಸ್ತ್ರಾಸ್ತ್ರ ವಶಕ್ಕೆ

ಹೈದರಾಬಾದ್ Prajakiran.com : ಆರು ಮಂದಿ ನಕ್ಸಲ್ ಎನ್‌ಕೌಂಟರ್ ನಲ್ಲಿ ಸಾವನ್ನಪ್ಪಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿರುವುದಾಗಿ ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಜಿಲ್ಲೆಯ ತೀಗಲಾಮೆಟ್ಟ ಅರಣ್ಯಪ್ರದೇಶದಲ್ಲಿ ಸಿಪಿಐ ಮತ್ತು ಗ್ರೇಹೌಂಡ್ಸ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ವಿಶಾಖ ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ರಾವ್ ತಿಳಿಸಿದ್ದಾರೆ.

ಎನ್‌ಕೌಂಟರ್ ನಲ್ಲಿ ಮಹಿಳೆ ಸೇರಿದಂತೆ ಆರು ಮಂದಿ ನಕ್ಸಲೀಯರ ಶವ ಪತ್ತೆಯಾಗಿದ್ದು, ಶಸ್ತ್ರಾಸ್ತ್ರಗಳನ್ನು ಘಟನೆ ನಡೆದ ಸ್ಥಳದಲ್ಲಿ ವಶಪಡಿಸಿಕೊಂಡಿರುವುದಾಗಿ ರಾವ್ ತಿಳಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *