ರಾಜ್ಯ

ಮಕ್ಕಳ ಜೀವನ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ : ಶಾಸಕ ಅಬ್ಬಯ್ಯ ಪ್ರಸಾದ್

ಹುಬ್ಬಳ್ಳಿ: ಮಕ್ಕಳ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಜೀವನಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಹುಬ್ಬಳ್ಳಿ-ಧಾರವಾಡದ ಪಶ್ಚಿಮ ಕ್ಷೇತ್ರದ ಶಾಸಕರಾದ ಅಬ್ಬಯ್ಯ ಪ್ರಸಾದ್ ಹೇಳಿದರು.

ಅವರು ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ನಗರದ ಅಂಜುಮನ್ ಶಾದಿ ಮಹಲ್‍ನಲ್ಲಿ ಭಾರತ ರತ್ನ ಡಾ|| ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಶಿಕ್ಷಕ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಶಿಕ್ಷಣ ಕ್ಷೇತ್ರ ಆಧುನಿಕರಣಗೊಳ್ಳುತ್ತಿದ್ದು, ಶಿಕ್ಷಕರು ಆಧುನಿಕ ಶಿಕ್ಷಣ ಪದ್ದತಿಗೆ ಹೊಂದಿಕೊಂಡು ತಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ. ಹುಬ್ಬಳ್ಳಿ-ಧಾರವಾಡ ಮತ ಕ್ಷೇತ್ರದಲ್ಲಿ ಹಲವಾರು ಶಾಲೆಗಳನ್ನು ಆಧುನೀಕರಣಗೊಳಿಸಲು ಶಾಸಕರ ಅನುದಾನದ ಅಡಿ ಸ್ಮಾರ್ಟ್ ಬೋರ್ಡ ಹಾಗೂ ಇನ್ನಿತರ ಸಾಧನ ಸಲಕರಣೆಗಳನ್ನು ಒದಗಿಸಲಾಗಿದೆ. ಮುಂಬರುವ ದಿನಗಳಲ್ಲಿ ಶಾಸಕರ ಅನುದಾನದ ಅಡಿ ಕ್ಷೇತ್ರ ಎಲ್ಲಾ ಶಾಲೆಗಳಿಗೂ ಸ್ಮಾರ್ಟ್ ಬೋರ್ಡ ಒದಗಿಸಲು ಅಂದಾಜು ಪಟ್ಟಿಯನ್ನು ರೂಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ 45ನ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಹುಬ್ಬಳ್ಳಿ ತಹಶೀಲದಾರ ಶಶಿಧರ ಮಾಡ್ಯಾಳ, ಪ್ರೋಬೆಷನರಿ ಉಪವಿಭಾಗಾಧಿಕಾರಿ ಶೇಖರ್.ಜೆ.ಡಿ, ಪಾಲಿಕೆ ಸದಸ್ಯ ವಿಜನಗೌಡ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಂಬಾರ, ಸೇರಿದಂತೆ ಇತರೆ ಅಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

Please follow and like us:

Leave a Reply

Your email address will not be published. Required fields are marked *