ತುಮಕೂರು : ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿದ್ದ ಮನೆಗೆ ನುಗ್ಗಿದ ಪರಿಣಾಮ ಒಬ್ಬ ಸಾವನ್ನಪ್ಪಿ, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಒಂದರ ಹಿಂದೆ ಒಂದು ಲಾರಿಗಳು ಸರಣಿ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ತುಮಕೂರಿನ ಶಿರಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಾದ 48ರಲ್ಲಿ ಈ ಘಟನೆ ನಡೆದಿದೆ.
ಮೊದಲು ಹಿಂದಿನಿಂದ ಬಂದ ಒಂದು ಲಾರಿ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಬಂದ ಲಾರಿಗಳು ಒಂದರ ನಂತರ ಒಂದೊಂದಾಗಿ ಬಂದು ಆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿವೆ.
ಹೀಗಾಗಿ ರಸ್ತೆ ಪಕ್ಕದಲ್ಲಿಯೇ ಇದ್ದ ಮನೆಗೆ ಲಾರಿಯೊಂದು ನುಗ್ಗಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರಿಗೂ ಏನೂ ಆಗಿಲ್ಲ. ಹರಿಯಾಣ ಮೂಲದ ಒಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರ ಅವರನ್ನು ಶಿರಾ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.