ಹುಬ್ಬಳ್ಳಿ prajakiran.com :
ಇನ್ನೋವಾ ಮತ್ತು ಬಲ್ಯಾನೋ ಕಾರು ಮುಖಾ ಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ
ಸ್ಥಳದಲ್ಲೇ ಇಬ್ಬರ ದುರ್ಮರಣವನ್ನಪ್ಪಿದ್ದಾರೆ.
ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿವೆ.
ಗಂಭೀರ ಗಾಯಗೊಂಡ ಮೂವರೂ ಕಿಮ್ಸ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ.
ಮೃತರು ಮತ್ತು ಗಾಯಾಳುಗಳು ಬಿಲ್ಯಾನೋ ಕಾರಿನಲ್ಲಿದ್ದವರು.
ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲ್ಯಾನೋ ಕಾರು.
ಗದಗನಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು
ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದ ಬಳಿ ಘಟನೆ ನಡೆದಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಲ್ಯಾನೋ ಕಾರು ಅಪಘಾತದಲ್ಲಿ ನುಜ್ಜು ಗುಜ್ಜಾಗಿದೆ.
ಗಾಯಾಳು ಮತ್ತು ಮೃತರ ಪತ್ತೆ ಯನ್ನು ಪೊಲೀಸರು ಹಚ್ಚುತ್ತಿದ್ದಾರೆ.


