ಅಂತಾರಾಷ್ಟ್ರೀಯ

ಮಹಾ ಸರಕಾರದ ಡಿಸಿಎಂ ಅಜಿತ್ ಪವಾರ್ ರಾಜೀನಾಮೆ

ಮುಂಬೈ PRAJAKIRAN.COM : ನಾಟಕೀಯ ಬೆಳವಣಿಗೆಯಲ್ಲಿ ಬೆಳ್ಳಂ ಬೆಳಗ್ಗೆ ಸರಕಾರ ರಚಿಸಿ ರಾಷ್ಟ್ರದ ಗಮನ ಸೆಳೆದಿದ್ದ ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಬಿಗ್ ಶಾಕ್ ಆಗಿದೆ.

ಬಿಜೆಪಿಗೆ ರಾತ್ರೋ ರಾತ್ರಿ ಬೆಂಬಲ ನೀಡಿದ್ದ ಎನ್ ಸಿ ಪಿ ಮುಖಂಡ ಅಜಿತ್ ಪವಾರ್ ತಮ್ಮ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರದ ಬಿಜೆಪಿ ಸರಕಾರದ ಮೊದಲ ವಿಕೆಟ್ ಪತನಗೊಂಡಂತಾಗಿದ್ದು, ಇನ್ನೂ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರದಿ ಎನ್ನಲಾಗುತ್ತಿದೆ.

ಹೀಗಾಗಿ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ನಾಳೆ ಮಹಾರಾಷ್ಟ್ರ ವಿಧಾನಸಭಾ ಸಭೆಯಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಅವರು ವಿಶ್ವಾಸ ಮತ ಯಾಚನೆ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬರುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಹೇಳಲಾಗುತ್ತಿದೆ.

ಈ ದಿಢೀರ್ ಬೆಳವಣಿಗೆಯಿಂದ ಮಹಾರಾಷ್ಟ್ರದಲ್ಲಿ ಇದೀಗ ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಉದ್ಭವ್ ಠಾಕ್ರೆ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಶಿವಸೇನಾ ಮುಖ್ಯಸ್ಥ ಸಂಜಯ ರಾವತ್ ಸ್ಪಷ್ಟಪಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *