ಧಾರವಾಡ prajakiran.com : ವಿದ್ಯಾನಗರಿ ಧಾರವಾಡದ ಜಿಲ್ಲೆಯಲ್ಲಿ ಮಂಗಳವಾರ ಎರಡು ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ-3436 ನೇ ಸೋಂಕಿತ 48 ವರ್ಷದ ಪುರುಷ ಹಾಗೂ ಪಿ-3437 ನೇ ಸೋಂಕಿತ 66 ವರ್ಷದ ಮಹಿಳೆ ಈ ಇಬ್ಬರೂ ರಾಜಸ್ಥಾನದ ಅಜ್ಮೀರ್ ನಿಂದ ಹಿಂದಿರುಗಿರುವ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಇವರಿಬ್ಬರು ಜಿಲ್ಲೆಯ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದರು.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ಈಗಾಗಲೇ 26 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.