ಜಿಲ್ಲೆ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ PRAJAKIRAN.COM : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಗ್ರಾಮೀಣ) ಯೋಜನೆಯಲ್ಲಿ ಖಾಲಿ ಇರುವ ೧ ಅಂಗನವಾಡಿ ಕಾರ್ಯಕರ್ತೆ ಮತ್ತು ೧೫ ಸಹಾಯಕಿ ಗೌರವ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ www.anganwadirecruit.kar.nic.in ವೆಬ್‌ಸೈಟ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಅಥವಾ ಕಂದಾಯ ಗ್ರಾಮದಲ್ಲಿ ವಾಸಿಸುತ್ತಿರುವ ೧೮ ರಿಂದ ೩೫ ವರ್ಷದೊಳಗಿನ ಮಹಿಳೆಯರು ಜನವರಿ ೩೧ ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ(ಗ್ರಾಮೀಣ) ಧಾರವಾಡ ದೂರವಾಣಿ ಸಂಖ್ಯೆ:೦೮೩೬-೨೪೪೪೮೩೮ ನ್ನು ಸಂಪರ್ಕಿಸಬಹುದು ಎಂದು ಹುಬ್ಬಳ್ಳಿ-ಧಾರವಾಡ(ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *