ನವದೆಹಲಿ : ಕೇಂದ್ರ ಸರ್ಕಾರದ ಪ್ರಭಾವಿ ಸಚಿವ ಹಾಗೂ ರಾಜ್ಯದ ಹಿರಿಯ ಬಿಜೆಪಿ ನಾಯಕ ಅನಂತಕುಮಾರ ಆರೋಗ್ಯ ದಲ್ಲಿ ಭಾರೀ ಏರುಪೇರು ಆಗಿದೆ.
ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಅವರು ತೀವ್ರ ತರಹದ ಕ್ಯಾನ್ಸರ್ ಹಾಗೂ ಕಿಡ್ನಿ ತೊಂದರೆಯಿಂದ ಬಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅವರ ಅನಾರೋಗ್ಯ ಮಾಹಿತಿ ಪಡೆದ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್, ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಸೇರಿ ಅನೇಕರು ಆಸ್ಪತ್ರೆಗೆ ದೌಡಾಯಿಸಿ ಅವರ ಆರೋಗ್ಯ ವಿಚಾರಿಸಿ, ವೈದ್ಯರ ಬಳಿ ಮಾಹಿತಿ ಪಡೆದರು.
ಇನ್ನಷ್ಟು ದಿನಗಳ ಕಾಲ ಅವರಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ವೈದ್ಯರು ನಿರ್ಧರಿಸಿದ್ದು, ಚಿಕಿತ್ಸೆ ಗೆ ಅವರು ಸ್ಪಂದಿಸುತ್ತಿದ್ದು, ಶೀಘ್ರ ಗುಣಮುಖರಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.