ರಾಜ್ಯ

ಪೊಲೀಸರಿಗೆ ಥಳಿಸಿದ ಜೂಜುಕೋರರು !

ಹುಬ್ಬಳ್ಳಿ : ಗಣೇಶ ಪೆಂಡಾಲ್ ನಲ್ಲಿ ಜೂಜು ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದರಿಂದ ರೊಚ್ಚಿಗೆದ್ದ ಜೂಜುಕೋರರು ಅವರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದ್ದ ಪೆಂಡಾಲ್ ವೊಂದರಲ್ಲಿ ಜೂಜಿನಲ್ಲಿ ತೊಡಗಿದ್ದ ವೇಳೆ ಈ ದುಷ್ಕೃತ್ಯ ನಡೆದಿದೆ.

ಈ ‍‍‍ಘಟನೆಯಲ್ಲಿ ಗಾಯಗೊಂಡ ಪೊಲೀಸರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಜೂಜುಕೋರರ ಈ ನಡೆಯಿಂದ ಬೆಚ್ಚಿ ಬಿದ್ದ ಪೊಲೀಸ್ ಇಲಾಖೆ ಜೂಜುಕೋರರ ಹೆಡೆ ಮುರಿ ಕಟ್ಟಲು ಸಿದ್ದತೆ ನಡೆಸಿದ್ದು, ಈ ಸಂಬಂಧ ಅವರ ವಿರುದ್ದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ.

 

Please follow and like us:

Leave a Reply

Your email address will not be published. Required fields are marked *