ಹುಬ್ಬಳ್ಳಿ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಅಣ್ಣಿಗೇರಿಯಲ್ಲಿ ನಡೆದಿದೆ.
ಸೋಮುವಾರ ಅಣ್ಣಿಗೇರಿ ತಾಲೂಕಿನ ಕೆನರಾ ಬ್ಯಾಂಕ್ ಬಳಿ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಅಣ್ಣಿಗೇರಿ ತಾಲೂಕು ನಿವಾಸಿ ಶೇಕ್ (೪೦) ಎಂದು ಗುರುತಿಸಲಾಗಿದೆ.
ಇನ್ನಿಬ್ಬರು ಬೈಕ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಅವರ ಹೆಸರು ತಿಳಿದುಬಂದಿಲ್ಲ. ಅವರಿಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಬ್ಯಾಂಕಿನಿಂದ ಕೆಲಸ ಮುಗಿಸಿ ನವಲಗುಂದ ರಸ್ತೆ ಮಾರ್ಗವಾಗಿ ಪಟ್ಟಣಕ್ಕೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ ಪರಿಣಾಮ ಶೇಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇನ್ನಿಬ್ಬರು ಬೈಕ ಸವಾರರು ನವಲಗುಂದ ಮಾರ್ಗವಾಗಿ ಗದಗ ಜಿಲ್ಲೆ ಚಿಂಚಲಿಗೆ ತೆರಳುತಿದ್ದರು. ಚಿಂಚಲಿ ಮೂಲದವರು ಎಂದು ತಿಳಿದುಬಂದಿದೆ. ಈ ಕುರಿತು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.