ಧಾರವಾಡ : ಧಾರವಾಡದ ಶಿವಾಜಿ ವೃತ್ತದಲ್ಲಿ ಕೇಸರಿ ಶಾಲು ಧರಿಸಿ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಶನಿವಾರ ನಡೆಯಿತು.
ಟಿಪ್ಪೂ ಜಯಂತಿ ಬದಲು ಅಫ್ಜಲ್ ಖಾನ್ ರನ್ನು ಶಿವಾಜಿ ಸಂಹಾರ ಮಾಡಿದ ದಿನದ ನಿಮಿತ್ತ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಆಗಮಿಸಿದ್ದ ಬಿಜೆಪಿ ಹಾಗೂ ಹಿಂದು ಸಂಘಟನೆಯ ಕಾರ್ಯಕರ್ತರು ಪೊಲೀಸರು ಮಾಲಾರ್ಪಣೆಗೆ ಅವಕಾಶ ನಿರಾಕರಣೆ ಮಾಡಿದ ಹಿನ್ನಲೆಯಲ್ಲಿ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ನಗರದಲ್ಲಿ ೧೪೪ ಸೆಕ್ಷನ್ ಜಾರಿ ಹಿನ್ನಲೆಯಲ್ಲಿ ಶೌರ್ಯ ದಿನಾಚರಣೆಗೆ ಯತ್ನಿಸಿದ ಹಲವು ಬಿಜೆಪಿ ಮುಖಂಡರನ್ನು ಬಂಧಿಸಲಾಯಿತು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮುಖಂಡರು ಪೊಲೀಸರ ಕ್ರಮವನ್ನು ಪ್ರಶ್ನಿಸಿದರು. ಇದರಿಂದಾಗಿ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಯಿತು.
ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಹುಬ್ಬಳ‍್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎಂ.ಎನ್. ನಾಗರಾಜ ಕಾರ್ಯಕ್ರಮ ಆಯೋಜಿಸಿದ್ದ ಶಂಕರ ಶೆಳಕೆ ಅವರನ್ನು ಬಂಧಿಸಿ, ಕರೆದೊಯ್ದುರು.