ಅಂತಾರಾಷ್ಟ್ರೀಯ

ಸೋಲಿನ ಬಳಿಕ ಎಚ್ಚೆತ್ತುಕೊಂಡ ಬಿಜೆಪಿ ಹೈ ಕಮಾಂಡ್

ನವದೆಹಲಿ : ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ಕೊನೆಗೂ ಎಚ್ಚೆತ್ತುಕೊಂಡ ಬಿಜೆಪಿ ಹೈಕಮಾಂಡ್ ಎಚ್ಚೆತ್ತುಕೊಂಡಿದೆ.

ಈ ಹಿನ್ನಲೆಯಲ್ಲಿ ಡಿ. 13ರಂದು ದೇಶದ ಎಲ್ಲ ರಾಜ್ಯದ ಬಿಜೆಪಿ ಅಧ್ಯಕ್ಷರು, ರಾಜ್ಯ ಪ್ರಭಾರಿಗಳು, ಸಹ ಪ್ರಭಾರಿಗಳು, ರಾಷ್ಟ್ರೀಯ ಕಾರ್ಯದರ್ಶಿಗಳು, ರಾಜ್ಯ ಸಂಘಟನಾ ಕಾರ್ಯದರ್ಶಿಗಳ ಸಭೆಯನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕರೆದಿದ್ದಾರೆ.

ಈ ಸಭೆಯೂ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆಯಲಿದ್ದು, ನಾಳೆ ಮಧ್ಯಾಹ್ನದಿಂದ ಸಂಜೆಯವರೆಗೆ ಈ ಮಹತ್ವದ ಸಭೆ ನಡೆಯಲಿದೆ.

ಸಭೆಯಲ್ಲಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲು ಅನುಭವಿಸಲು ಪ್ರಮುಖ ಕಾರಣ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ಮರುಕಳಿಸದಂತೆ ನೋಡಿಕೊಳ್ಳಲು ಕೈ ಗೊಳ್ಳಬೇಕಾದ ಕ್ರಮಗಳ ಕುರಿತು ಪರಮರ್ಶಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಹಾಲಿ ವಿರೋಧ ಪಕ್ಷದ ನಾಯಕರು ಆಗಿರುವ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿಯ ಅಧಿವೇಶನದ ಹಿನ್ನಲೆಯಲ್ಲಿ ಸಭೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ.

ಸೋಲಿನಿಂದ ಕೆಂಗಟ್ಟಿರುವ ಬಿಜೆಪಿ ಹೈಕಮಾಂಡ್ ಮುಂದಿನ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನಲೆಯಲ್ಲಿ ಮೋದಿ ಹಾಗೂ ಅಮಿತ್ ಷಾ ನೂತನ ಸೂತ್ರ ಸಿದ್ದಪಡಿಸಲು ನಿರ್ಧರಿಸಿದ್ದು, ಬಿಜೆಪಿ ಚುನಾವಣಾ ತಂತ್ರಗಳನ್ನು ಹೆಣೆಯಲು ಮುಂದಾಗಿದೆ.

ಸೋಲಿನಿಂದ ಕೆಂಗಟ್ಟಿರುವ ಬಿಜೆಪಿ ಹೈಕಮಾಂಡ್ ಮುಂದಿನ ಲೋಕಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನಲೆಯಲ್ಲಿ ಮೋದಿ ಹಾಗೂ ಅಮಿತ್ ಷಾ ನೂತನ ಸೂತ್ರ ಸಿದ್ದಪಡಿಸಲು ನಿರ್ಧರಿಸಿದ್ದು, ಬಿಜೆಪಿ ಚುನಾವಣಾ ತಂತ್ರಗಳನ್ನು ಹೆಣೆಯಲು ಮುಂದಾಗಿದೆ

Please follow and like us:

Leave a Reply

Your email address will not be published. Required fields are marked *