ಧಾರವಾಡ PRAJAKIRAN. COM : ವಿಜಯದಶಮಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಆಯೋಜಿಸಿದ್ದ ಬೃಹತ್ ಪಥಸಂಚಲನದಲ್ಲಿ ಇಬ್ಬರು ಬಿಜೆಪಿ ಶಾಸಕರು ಸಖತ್ ಆಗಿ ಮಿಂಚಿದರು.
ಹುಬ್ಬಳ್ಳಿ - ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಹಾಗೂ ಧಾರವಾಡ ವಿಧಾನ ಸಭಾ ಕ್ಷೇತ್ರ-71ರ ಬಿಜೆಪಿ ಶಾಸಕ ಅಮೃತ ದೇಸಾಯಿ ಅವರು ಪಾಲ್ಗೊಂಡರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗಣವೇಷ ತೊಟ್ಟು ಆರ್ ಎಸ್ ಎಸ್ ಕಾರ್ಯಕರ್ತರೊಂದಿಗೆ ಪಥ ಸಂಚಲನದಲ್ಲಿ ಶಿಸ್ತಿನಿಂದ ಹೆಜ್ಜೆ ಹಾಕಿ ಸಾರ್ವಜನಿಕರ ಗಮನ ಸೆಳೆದರು.
ಧಾರವಾಡ ಪಶ್ವಿಮ ಶಾಸಕ ಅರವಿಂದ ಬೆಲ್ಲದ ಕಳೆದ ಹಲವು ವರ್ಷಗಳಿಂದ ಸಕ್ರಿಯವಾಗಿ ಆರ್ ಎಸ್ ಎಸ್ ಪಥ ಸಂಚಲನದಲ್ಲಿ ಭಾಗವಹಿಸುತ್ತಾ ಬಂದಿದ್ದರೆ, ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಇದೇ ಮೊದಲ ಬಾರಿಗೆ ಗಣವೇಷ ಧರಿಸಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ಇಬ್ಬರು ಶಾಸಕರು ತಮ್ಮೊಂದಿಗೆ ಗಣವೇಷದೊಂದಿಗೆ ಪಥ ಸಂಚಲನದಲ್ಲಿ ಭಾಗವಹಿಸಿದಕ್ಕೆ ಪುಳಕಿತಗೊಂಡ ಬಿಜೆಪಿ ಕಾರ್ಯಕರ್ತರು ಅವರೊಂದಿಗೆ ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದರು.