ರಾಜ್ಯ

ರಾಯಚೂರು, ಚಿಕ್ಕೋಡಿಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

ರಾಯಚೂರು/ಚಿಕ್ಕೋಡಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದ್ದು, ಬಿಜೆಪಿ ಟಿಕೇಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ರಾಯಚೂರು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿಬಿಜೆಪಿಗೆ ಬಂಡಾಯದ ಬಿಸಿ ತಾಕಿದೆ.

ರಾಯಚೂರು ಲೋಕಸಭಾ ಬಿಜೆಪಿ ಟಿಕೇಟ್ ಕೈ ತಪ್ಪಿದ್ದರಂದ ಗರಂ ಆಗಿರುವ ಮಾಜಿ ಶಾಸಕ ತಿಪ್ಪರಾಜ ಹವಾಲ್ದಾರ್ ಬಂಡಾಯಕ್ಕೆ ಮುಂದಾಗಿದ್ದಾರೆ. ರಾಜಾ ಅಮರೇಶ್ವರ್ ನಾಯಕ ಅವರಿಗೆ ಟಿಕೇಟ್ ದೇವದುರ್ಗ ಶಾಸಕ ಶಿವನಗೌಡ ನಾಯಕ ಮೇಲುಗೈ ಸಾಧಿಸಿರುವುದು ಅವರ ಅಸಮಾಧಾನಕ್ಕೆಕಾರಣವಾಗಿದೆ.

ಹೀಗಾಗಿ ತಿಪ್ಪುರಾಜ್ ಹವಾಲ್ದಾರ್ ಅವರು ನಾಳೆ ತಮ್ಮ ಬೆಂಬಲಿಗರ ಸಭೆ ಕರೆದು, ಅವರ ಸಲಹೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಅದೇ ರೀತಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ದೊರೆತಿದ್ದರಿಂದ ರೊಚ್ಚಿಗೆದ್ದ ಮಾಜಿ ಸಚಿವ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೇಟ್ ಸಿಗದಿದ್ದಕ್ಕೆ ಬೇಸರಗೊಂಡಿದ್ದಾರೆ.

ಅಲ್ಲದೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಅವರ ಮನವೊಲಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ, ಏಪ್ರಿಲ್ ನಾಲ್ಕರವರೆಗೆ ಕಾದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಚ್ಚರಿಕೆನೀಡಿದ್ದಾರೆ.

ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೇಟ್ ದೊರಕದ್ದರಿಂದ ಬಿಜೆಪಿ ವಿರುದ್ದ ಸಮರ ಸಾರುತ್ತಾರಾ ಎಂಬುದು ಇದೀಗಬಿಜೆಪಿ ನಾಯಕರಿಗೆ ತಲೆ ನೋವಾಗಿದೆ.

Please follow and like us:

Leave a Reply

Your email address will not be published. Required fields are marked *