ಧಾರವಾಡ : ಕಳೇದ ಹಲವು ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಮೂರು ಜಾನವಾರು ಕಳೆದುಕೊಂಡ ರೈತನ ಕುಟುಂಬಕ್ಕೆ ಸರಕಾರದಿಂದ ಪರಿಹಾರ ಧನ ವಿತರಿಸಲಾಗಿದೆ.
ಇಲ್ಲಿಯ ನವಲೂರ ಅಗಸಿ ಕೊಳಿಕೇರಿ ನಿವಾಸಿ ಗುರುಪ್ರಸಾದ ಪಡದಯ್ಯಾ ತುರಮರಿಮಠ ಅವರ ದನದ ಕೊಟ್ಟಿಗೆಯು ಸಂಪೂಣ೯ವಾಗಿ ಬಿದ್ದು ಹೋಗಿತ್ತು. ಅದರಿಂದಾಗಿ ಸ್ಥಳದಲ್ಲಿಯೇ ಎರಡು ಎಮ್ಮೆ ಹಾಗೂ ಒಂದು ಕರು ಸಾವನ್ನಪ್ಪಿತ್ತು.
ಈ ಹಿನ್ನಲೆಯಲ್ಲಿ ಶನಿವಾರ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಅವರು ರೈತ ಗುರುಪ್ರಸಾದ ಅವರಿಗೆ ಸರಕಾರದ ವಿಪತ್ತು ಪರಿಹಾರ ನಿಧಿಯಿಂದ 65 ಸಾವಿರ ರೂಪಾಯಿ ಪರಿಹಾರ ಧನವನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ತವನಪ್ಪ ಅಷ್ಟಗಿ, ಪಾಲಿಕೆ ಸದಸ್ಯ ಶಂಕರ ಶೇಳಕೆ ,ಗ್ರಾಮ ಲೆಕ್ಕಾಧಿಕಾರಿ ಆನ೦ದ ಅನೇಕಿವಿ ಉಪಸ್ಥಿತರಿದ್ದರು.
ಧಾರವಾಡ : ಧಾರವಾಡವು ವಿದ್ಯಾರ್ಥಿ ದೆಸೆಯಿಂದಲೂ ಬದುಕನ್ನು ಕಟ್ಟಿಕೊಟ್ಟಿದೆ. ವಿದ್ಯಾರ್ಥಿ ಜೀವನದಿಂದ ಹಿಡಿದು ಜಿಲ್ಲಾಧಿಕಾರಿಯಾಗಿ ಸೇವೆಗೈದ ಧಾರವಾಡ ಪ್ರತಿ ಕ್ಷಣವೂ ನನಗೆ ಅವಿಸ್ಮರಣೀಯವಾಗಿವೆ ಎಂದು ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು. ಅವರು ಆಲೂರು ವೆಂಕಟರಾವ್ ಸಭಾಭವನದಲ್ಲಿ ಗುರುವಾರ ಸಂಜೆ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸಮಸ್ಯೆಗಳು ಪರಿಹಾರವಾದರೆ ಜನರು ರಾಜಧಾನಿಗೆ ಹೋಗುವುದು ತಪ್ಪುತ್ತದೆ. ನನಗಿಂತಲೂ ಸಮರ್ಥವಾದ ದಕ್ಷ ಅಧಿಕಾರಿ ಎಂ.ದೀಪಾ ಅವರು ಜಿಲ್ಲಾಧಿಕಾರಿಯಾಗಿ ಬಂದಿದ್ದಾರೆ. ಅವರ ಅವಧಿಯಲ್ಲಿ ಜಿಲ್ಲೆಯ ಹೆಸರು ಇನ್ನಷ್ಟು […]
ಧಾರವಾಡ : ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಅಲ್ಲದೆ ಮಾನಸಿಕ, ದೈಹಿಕ, ಭಾವನಾತ್ಮಕ ಬೆಳವಣಿಗೆಗೆ ಸಹಕಾರಿಯಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ ಹೇಳಿದರು. ಅವರು ನಗರದ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಶ್ರೀ ಸಾಯಿ ಪದವಿ ಪೂರ್ವ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮತ್ತು ಕಾಲೇಜು ಒಕ್ಕೂಟಗಳ ಉದ್ಘಾಟನಾ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿಜ್ಞಾನ ವಿಷಯ […]
ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಅವರು ಭೇಟಿ ಮಾಡಿ ಕೆಲ ಕಾಲ ಮಾತುಕತೆ ನಡೆಸಿದರು. ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತ ಸಮೂಹವನ್ನು ಹೊಂದಿರುವ ಧಾರವಾಡದ ಮುರುಘಾಮಠದ ಪ್ರಸಾದ ನಿಲಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭಕ್ಕೆ ಆಗಮಿಸುವಂತೆ ಭೇಟಿ ವೇಳೆ ಸಂಸದರು ಕೋರಿದರು. ಸಂಸದರ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ರಾಷ್ಟ್ರಪತಿಗಳು ಈ ಬಗ್ಗೆ ಶೀಘ್ರದಲ್ಲಿಯೇ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ. Share on: […]