ಅಂತಾರಾಷ್ಟ್ರೀಯ

ದೆಹಲಿ ಸಿಎಂ ಮೇಲೆ ಖಾರದ ಪುಡಿ ಎರಚಿ ಹಲ್ಲೆಗೆ ಯತ್ನ !

ನವದೆಹಲಿ : ನವದೆಹಲಿಯ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ ಕೇಜರಿವಾಲ್ ಮೇಲೆ ಆಗುಂತಕನೊಬ್ಬ ಖಾರದ ಪುಡಿ ಎರಚಿ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ತಕ್ಷಣ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಕೈ ಗೆ ಆರೋಪಿ ಸಿಕ್ಕಿ ಬಿದ್ದಿದ್ದು, ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಈ ಘಟನೆ ದೆಹಲಿ ಸಿಎಂ ಅರವಿಂದ ಕ್ರೇಜಿವಾಲ್ ಅವರ ಮುಖ್ಯಮಂತ್ರಿ ಸಚಿವಾಲಯದ ಆವರಣದಲ್ಲಿಯೇ ನಡೆದಿರುವುದು ಭದ್ರತಾ ವೈಪಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡರು ಕೇಂದ್ರದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರದತ್ತ ಬೊಟ್ಟು ಮಾಡುತ್ತಿದ್ದಾರೆ.

ನವದೆಹಲಿ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಅಲ್ಲಿಯ ಭದ್ರತಾ ವ್ಯವಸ್ಥೆ ನೇರವಾಗಿ ಕೇಂದ್ರ ಗೃಹ ಸಚಿವರ ಅಣತಿಯೆಂತೆ ಕಾರ್ಯ ನಿರ್ವಹಿಸುತ್ತದೆ.

ಪೊಲೀಸರು ಸಮರ್ಪಕ ಭದ್ರತೆ ಒದಗಿಸುವಲ್ಲಿ ವಿಫಲವಾಗಿದ್ದಾರೆ. ಕೇಂದ್ರ ಸರಕಾರದ ಕೈಗೊಂಬೆಯಂತೆ ಇಲ್ಲಿಯ ಪೊಲೀಸರು ವರ್ತಿಸುತ್ತಿರುವುದರಿಂದ ಇಂತಹ ಘಟನೆಗಳು ಪುನಃ ಪುನಃ ನಡೆಯುತ್ತಿದ್ದರೂ ಕೇಂದ್ರ ಸರಕಾರ ಏಚ್ಚೆತ್ತುಕೊಂಡಿಲ್ಲ ಎಂದು ಕಿಡಿಕಾರಿದೆ.

ಅಲ್ಲದೆ, ಕೂಡಲೇ ದೆಹಲಿ ಪೊಲೀಸ್ ವ್ಯವಸ್ಥೆಯನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಆಗ್ರಹಿಸಿದೆ. ಇದಿಗ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಇದು ಆಮ್ ಆದ್ಮಿ ಪಕ್ಷದ ದೊಡ್ಡ ನಾಟಕ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ. ಆಪ್ ರಾಜಕೀಯ ಪಿತೂರಿ, ಗಿಮಿಕ್ ಹೊಸದೇನಲ್ಲ. ಈ ಹಿಂದೆ ಸಹ ಅರವಿಂದ್ ಕೇಜರಿವಾಲ್ ಅವರ ವಿರುದ್ದ ಮೊಟ್ಟೆ, ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಕುಟುಕಿದೆ.

Please follow and like us:

Leave a Reply

Your email address will not be published. Required fields are marked *