ರಾಜ್ಯ

ಟಿಪ್ಪು ಜಯಂತಿಗೆ ಸಿಎಂ, ಡಿಸಿಎಂ ಗೈರು !

ಬೆಂಗಳೂರು : ಟಿಪ್ಪು ಸುಲ್ತಾನ್ ಜಯಂತಿಗೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಗೈರು ಹಾಜರಾಗಿದ್ದಾರೆ.

ವಿಧಾನಸೌಧದ ಬಾಕ್ವೆಂಟ್ ಹಾಲ್ ನಲ್ಲಿ ರಾಜ್ಯ ಸರಕಾರದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಜಯಂತಿಯಿಂದ ಇಬ್ಬರು ಅಂತರ ಕಾಯ್ದುಕೊಂಡಿರುವುದು ಒಂದು ರೀತಿಯಲ್ಲಿ ಸರಕಾರಕ್ಕೆ ಮುಜುಗರ ಉಂಟು ಮಾಡಿದೆ.

ಸಿಎಂ ವಿಶ್ರಾಂತಿಯ ನೆಪದಲ್ಲಿ ಟಿಪ್ಪು ಜಯಂತಿಯಿಂದ ದೂರ ಉಳಿದರೆ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಮಾಜಿ ಸಚಿವ ಚೆನ್ನಿಂಗಪ್ಪ ಅನಾರೋಗ್ಯದ ಹಿನ್ನಲೆಯಲ್ಲಿ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಿಂಗಾಪುರ ಪ್ರವಾಸ ಕೈಗೊಂಡಿದ್ದಾರೆ.

ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಠ ಹಿಡಿದು ಆರಂಭಿಸಿದ ಟಿಪ್ಪು ಜಯಂತಿಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲಾ, ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಅವರು ತುಂಬಾ ಆಸಕ್ತಿ ವಹಿಸಿ ಈ ಟಿಪ್ಪು ಜಯಂತಿ ಆಯೋಜಿಸಿರುವುದು ವಿಶೇಷವಾಗಿದೆ.

ಅವರಿಬ್ಬರ ನಡೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಮುಖಂಡರಲ್ಲಿ ತಳಮಳ ಉಂಟು ಮಾಡಿದ್ದು, ಇವರಿಬ್ಬರ ನಡೆಯೂ ನಿಗೂಢವಾಗಿರುವುದು ಹಲವು ಪರವಿರೋಧ ಚರ್ಚೆಗೆ ಆಸ್ಪದ ಮಾಡಿಕೊಟ್ಟಿರುವುದು ಸುಳ್ಳಲ್ಲ.

Please follow and like us:

Leave a Reply

Your email address will not be published. Required fields are marked *