ಮಂಡ್ಯ: ಮುಖ್ಯಮಂತ್ರಿಯಾದ ಬಳಿಕ ಮಂಡ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಂಡ್ಯದಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ಸ್ವಾಗತ ನೀಡಿವೆ.
ಈ ಪ್ರತಿಭಟನೆ ನಡೆದಿದ್ದು, ಮಾಜಿ ಶಾಸಕ ಹಾಗೂ ರೈತ ಹೋರಾಟಗಾರ ಕೆ.ಎಸ್. ಪುಟ್ಟಣ್ಣಯ್ಯ ಮಗ ದರ್ಶನ ನೇತೃತ್ವದಲ್ಲಿ ನಡೆದಿದ್ದು ವಿಶೇಷವಾಗಿದೆ.
ಕೆಆರ್ಎಸ್ ಡ್ಯಾಂನಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿ ಆಗಮನದ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಪ್ರತಿಭಟನೆ ಕಾವು ಜೋರಾಗಿದೆ.
ರೈತರ ಸಂಪೂರ್ಣ ಸಾಲಮನ್ನಾ, ಮೈಶುಗರ್, ಪಿಎಸ್ಎಸ್ಕೆಗೆ ಅನುದಾನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ ಹಮ್ಮಿಕೊಂಡಿತ್ತು.
ಸಿಎಂ ಆಗಮನದ ಹಿನ್ನೆಲೆಯಲ್ಲಿ ಸತತ ಏಳು ಗಂಟೆಗಳ ಕಾಲ ಸಂಚಾರ ಬಂದ್ ಮಾಡಿರುವುದು ಕೂಡ ಪ್ರತಿಭಟನಾಕಾರರ ಆಕ್ರೋಶಕ್ಕೆ ಗುರಿಯಾಗಿದೆ. ಜನ ಸಾಮಾನ್ಯರ ಹಾಗೂ ರೈತರ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುವ ಕುಮಾರಸ್ವಾಮಿಗೆ ಇಷ್ಟು ಆಡಂಬರವೇಕೆ ಎಂದು ಪ್ರಶ್ನಿಸಿದ್ದಾರೆ.
ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಕೆಆರ್ಎಸ್ ಜಲಾಶಯದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹುಬ್ಬಳ್ಳಿ : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಉತ್ತರ ಕರ್ನಾಟಕ ಸಂಪೂರ್ಣ ಮರೆತಿದ್ದಾರೆ. ರಾಜ್ಯದ 13 ಜಿಲ್ಲೆಗಳನ್ನು ಹೇಳೂರು ಕೇಳೋರು ಯಾರು ಇಲ್ಲದಂತಾಗಿದೆ ಎಂದು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಅವರು ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 15 ಆಗಸ್ಟ್ ನೆಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣಕ್ಕೆ ಬರುತ್ತಿದ್ದಾರೆ. ಈವರೆಗೆ ಒಂದೇ ಒಂದು ಅಭಿವೃದ್ದಿ ಕಾಮಗಾರಿ ನಡೆಯುತ್ತಿಲ್ಲ. ಈ ಸರಕಾರ ದೀವಾಳಿ ಆಗಿದೆ ಎಂದು ಗುಡುಗಿದರು. ಇದೇ ವೇಳೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ರಾಜ್ಯದ […]
ಚಿಕ್ಕಮಗಳೂರು: ಕಳೆದ ಕೆಲವು ದಿನಗಳಿಂದ ಭೂಮಿ ಕಂಪಿಸಿದ ಅನುಭವಕ್ಕೆ ಇಡೀ ಗ್ರಾಮಸ್ಥರು ತತ್ತರಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ. ಕಳೆದ ಎರಡು ಮೂರು ತಿಂಗಳಿಂದ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದು, ಈ ಬಗ್ಗೆ ತಾಲೂಕು ಹಾಗೂ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದರೂ ವಿಪತ್ತು ನಿರ್ವಹಣೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಅಭಯ ನೀಡುವ ಕೆಲಸ ಮಾಡಿಲ್ಲ ಎಂದು ಗ್ರಾಮಸ್ಥರು ಅಳಲು ತೊಡಿಕೊಂಡಿದ್ದಾರೆ. ಇದರಿಂದಾಗಿ ರಾತ್ರಿಯಿಡಿ ಎಚ್ಚರವಿದ್ದ ಗ್ರಾಮಸ್ಥರು ಭೂಮಿ ಒಳಗಡೆಯಿಂದ ಭಾರೀ […]
ಬೆಂಗಳೂರು : ರಾಜ್ಯದ ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೂರು ನಾಲ್ಕು ಕರವಸ್ತ್ರ ಒದ್ದೆಯಾಗುವಷ್ಟು ಕಣ್ಣೀರು ಹಾಕಿರುವುದು ರ್ದುದೈವದ ಸಂಗತಿಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಕಿಡಿಕಾರಿದ್ದಾರೆ. ಅವರು ಶನಿವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಅವರು ನಿಜವಾಗಿಯೂ ನಾಲ್ಕೈದು ಕರವಸ್ತ್ರ ಒದ್ದೆಯಾಗುವರೆಗೆ ಅತ್ತಿದ್ದು ನೋಡಿದರೆ, ನನಗೆ ಅನುಮಾನ ಬರ್ತಾಯಿದೆ. ಏಕೆಂದರೆ ಒಬ್ಬ ಸಿಎಂ ಆಗಿ ಅಷ್ಟು ಅಳೋದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಸಿಎಂ ಆಗಿ ಕಣ್ಣೀರು […]