ಹುನಗುಂದ : ಪಟ್ಟಣದಲ್ಲಿ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ತಾರಕ್ಕೇರಿದ್ದು, ಈ ಘಟನೆಯಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿ ಐವರು ಗಾಯಗೊಂಡಿದ್ದಾರೆ.
ಗುರುವಾರ ನಿಗದಿಯಾಗಿದ್ದ ಪಿಕೆಪಿಎಸ್ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆದಿದೆ. ಆ ವೇಳೆ ಆಗಮಿಸಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಸಹಾಯಕ ಚುನಾವಣಾಧಿಕಾರಿ ಎಸ್.ಬಿ ಚಳಗೇರಿ ಸೇರಿ ಅನೇಕರು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಇದಲ್ಲದೆ, ಉದ್ರಿಕ್ತ ಜನರ ಗುಂಪು ಡಿ ಆರ್ ವಾಹನ, ಪೊಲೀಸ್ ಜೀಪ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಬಿಗಡಾಯಿಸಿದ ಪರಿಣಾಮ ಪೊಲೀಸರು ಅವರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತವರಣವಿದ್ದು, ಘಟನಾ ಸ್ಥಳಕ್ಕೆ ಬಾಗಲಕೋಟಿ ಹಾಗೂ ಇಳಕಲ್ ನಿಂದ ಹೆಚ್ಚುವರಿ ಪೊಲೀಸ್ ಕರೆಸಲಾಗಿದೆ.
ಇದು ಹಾಲಿ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ನಡುವೆ ಮುಂದುವರೆದ ಗದ್ದುಗೆ ಗುದ್ದಾಟದ ಭಾಗವಾಗಿದೆ ಎಂದು ಹೇಳಲಾಗುತ್ತಿದೆ.
ಮೈಸೂರು : ನಿನ್ನೇ ನಡೆದ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸಂಸದ ಪ್ರತಾಪ ಸಿಂಹ ಮತಗಟ್ಟೆಗೆ ಪ್ರವೇಶಿಸಿದ್ದಕ್ಕೆ ಮತದಾರರು ಸರಿಯಾಗಿ ಕ್ಲಾಸ್ ತೆಗೆದುಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೈಸೂರು ಮಹಾನಗರ ಪಾಲಿಕೆ ಮತಗಟ್ಟೆಯಾದ ಶ್ರೀಕಂಠೇಶ್ವರ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದೆ. ಮತದಾರರದಲ್ಲದವರು ಒಳಗಡೆ ಬರುವಂತಿಲ್ಲ. ನೀವು ಆಚೆ ಹೋಗಿ ಪೊಲೀಸರೇ ಅವರನ್ನೇ ಏಕೆ ಒಳಗೆ ಬಿಟ್ಟಿದ್ದೀರಿ.ಮತದಾರರಲ್ಲದವರಿಗೆ ಹೀಗೆ ಬೀಡುತ್ತೀರಾ ಎಂದು ತೀವ್ರ ತರಾಟೆ ತೆಗೆದುಕೊಂಡರು. ಇದರಿಂದ ತೀವ್ರ ಮುಜುಗರಕ್ಕೊಳಗಾದ ಸಂಸದ ಪ್ರತಾಪ ಸಿಂಹ […]
ಮೈಸೂರು : ಸುತ್ತೂರು ದೇಶಿಕೇಂದ್ರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳ 103 ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಹಾಲಿ-ಮಾಜಿ ಸಿಎಂ ಸಮಾಗಮವಾಗಿದೆ. ಹಾಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪರಸ್ಪರ ಹಸ್ತಲಾಘವ ಮಾಡಿಕೊಂಡು ಮುಗಳನಕ್ಕು ಅಕ್ಕಪಕ್ಕದಲ್ಲಿಯೇ ಕುಳಿತುಕೊಂಡಿದ್ದರು. ಪರಸ್ಪರ ರಾಜಕೀಯ ಬದ್ಧವೈರಿಗಳು ಈ ರೀತಿ ಹಲವು ನಿಮಿಷಗಳ ಕಾಲ ಉಭಯ ಕುಶಲೋಪರಿ ಹಂಚಿಕೊಂಡು ವೇದಿಕೆ ಮೇಲೆ ರಾರಾಜಿಸಿದ್ದು ಎಲ್ಲರ ಗಮನ ಸೆಳೆಯಿತು. ಯಡಿಯೂರಪ್ಪ ಹೆಸರು ಮರೆತ ಸಿಎಂ : ಆನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ […]
ಧಾರವಾಡ : ಶಿಕ್ಷಕರು ಮಾನವ ಸಂಪನ್ಮೂಲವನ್ನು ಸೃಷ್ಟಿಸುವ ಮೂಲಕ ರಾಷ್ಟ್ರದ ನಿರ್ಮಾತೃಗಳಾಗಿದ್ದಾರೆ. ಎಲ್ಲ ವೃತ್ತಿಗಳಿಗಿಂತಲೂ ಶಿಕ್ಷಕ ವೃತ್ತಿಗೆ ಹೆಚ್ಚು ಗೌರವ ಸಿಗಬೇಕು. ದೇಶದ ಒಟ್ಟು ಜಿಡಿಪಿಯ ಶೇ.6 ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಖರ್ಚು ಮಾಡಲು ಉದ್ದೇಶಿಸಲಾಗಿದೆ ಎಂದು ಸಂಸದ ಪ್ರಲ್ಹಾದ್ ಜೋಷಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಭವನದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನೋತ್ಸವ, ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಹಾಗೂ […]