ಉಡುಪಿ : ಭಾರತ ಬಂದ್ ವೇಳೆ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಪ್ರಭಾಕರ ಪೂಜಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲು ಆಗಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಅವರ ಮೇಲೆ ಹಲ್ಲೆ ಮಾಡಿ ಗಂಭೀರ ಗಾಯಗೊಳಿಸಿದ್ದಾರೆ ಎನ್ನಲಾಗಿದೆ. ಇದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿತ್ತು. ಕೂಡಲೇ ಎಚ್ಚೆತ್ತ ಉಡುಪಿ ಎಸ್ಪಿ ಲಕ್ಷ್ಮಣ ನಿಂಬರಗಿ ಕೂಡಲೇ ಲಾಠಿ ಚಾರ್ಜ್ ಮಾಡಿ ಗುಂಪುಗಳನ್ನು ಚದುರಿಸಿದರು.
ಸದ್ಯ ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದ್ದು. ಸ್ಥಳದಲ್ಲಿ ಬಿಗುವಿನ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬೆಂಗಳೂರು : ರಾಜ್ಯ ಸರಕಾರಿ ನೌಕರರ ಬಡ್ತಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಸೆಪ್ಟಂಬರ್ 5ರಂದು ಸುಪ್ರೀಂಕೋರ್ಟ್ ತೀರ್ಪು ಆಧರಿಸಿ ಮುಂದಿನ ಹೆಜ್ಜೆ ಇರಿಸಲಾಗುವುದು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು. ಅವರು ಶುಕ್ರವಾರ ರಾತ್ರಿ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ವರ್ಗದ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಲಾಗುವುದು. ಇದರಲ್ಲಿ ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು. ಭಾರಿ ಮಳೆಗೆ ನಲಗು ಹೋಗಿರುವ ಕೊಡಗು ಪ್ರವಾಹ ಪೀಡಿತ ಅನಾಹುತ ಪುನರ್ ನಿರ್ಮಾಣಕ್ಕೆ ಪ್ರಥಮ […]
ಧಾರವಾಡ : ಪ್ಲಾಸ್ಟಿಕ್ ಬಳಸದಂತೆ ಸಾಕಷ್ಟು ಜಾಗ್ರತೆ ಮೂಡಿಸಿದರೂ ಅದು ಕಾರ್ಯರೂಪಕ್ಕೆ ಬರುತ್ತಿಲ್ಲ. ಹೀಗಾಗಿ ಧಾರವಾಡದ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ರಾಜ್ಯಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಶುಕ್ರವಾರ ಜಂಟಿ ಕಾರ್ಯಚರಣೆ ನಡೆಸಿ, ಅಂಗಡಿ ಮಾಲೀಕರಿಗೆ ಬಿಸಿ ತಾಕಿಸಿದ್ದಾರೆ. ಧಾರವಾಡದ ಸುಭಾಷ್ ರಸ್ತೆ, ಸೂಪರ ಮಾರ್ಕೆಟ್, ನೆಹರೂ ಮಾರ್ಕೆಟ್ ಮತ್ತಿತರ ಕಡೆಗಳಲ್ಲಿ ದಾಳಿ ನಡೆಸಿ ವಿವಿಧ ಅಂಗಡಿಗಳಲ್ಲಿ ಕದ್ದು ಮುಚ್ಚಿ ಬಳಸುತ್ತಿದ್ದ ಪ್ಲ್ಯಾಸ್ಟಿಕ್ ಹಾಗೂ ರಿಫ್ರೆಶ್ ಮೆಂಟ್ ಗಳಲ್ಲಿ ಮಾರಾಟ ಮಾಡುತ್ತಿದ್ದ ಅಂಗಡಿಗಳ […]
ಹುಬ್ಬಳ್ಳಿ : ವಿಶೇಷವಾದ ಹಾವೊಂದು ಕಾಣಿಸಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಅಗಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಅಗಡಿ ಗ್ರಾಮದಲ್ಲಿ ಕಾಣಿಸಿಕೊಂಡ ಈ ಹಾವಿನ ಹೆಸರು ದಾಸರಹಾವು. ಇದು ಬಲು ಅಪರೂಪದ ಹಾವಾಗಿದ್ದು, ಇಂತಹ ದಾಸರಹಾವು ರಕ್ಷಣೆ ಮಾಡಿದ ಅಡಿವೆಪ್ಪ ನಾಯಕ ಹಾಗೂ ಗ್ರಾಮಸ್ಥರು. ಅದನ್ನು ಪಶ್ಚಿಮ ಘಟ್ಟ ಕಾರ್ಯಪಡೆ ಸದಸ್ಯ ಸುರೇಶ ಸಂಗನ್ನವರ ಸೂಚನೆಯಂತೆ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟು ಮಾನವೀಯತೆ ಮೆರೆದಿದ್ದಾರೆ. ಆ ಮೂಲಕ ಗ್ರಾಮಸ್ಥರ ಮಾನವೀಯತೆ ಇತರರಿಗೆ ಮಾದರಿಯಾಗಿದೆ. Share on: WhatsAppPlease follow and […]