ಧಾರವಾಡ PRAJAKIRAN.COM : ೨೦೧೮-೧೯ನೇ ಸಾಲಿನಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ, ಪ್ರೋತ್ಸಾಹಧನ ಮಂಜೂರು ಮಾಡುವ ಕುರಿತು ಅರ್ಜಿ ಸಲ್ಲಿಸುವ ಅವಧಿಯನ್ನು ಜನೇವರಿ ೩೧, ೨೦೨೦ ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಸಂಪೂರ್ಣ ವಿವರ ಪಡೆಯಲು ಹಾಗೂ ಅರ್ಜಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಅಲ್ಲದೆ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಇಲ್ಲವೇ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಿಗೆ ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿನಿರ್ದೇಶಕರು ತಿಳಿಸಿದ್ದಾರೆ.