ಅಮೆರಿಕಾ : ಅಮೆರಿಕ ಜೈಲಿನಲ್ಲಿರುವ ಮುಂಬೈ ಬಾಂಬ್ ಸ್ಪೋಟದ ಪ್ರಮುಖ ಆರೋಪಿ ಡೇವಿಡ್ ಹೆಡ್ಲಿಗೆ ಜೈಲಿನಲ್ಲಿಯೇ ಸಹ ಖೈದಿಗಳು ಗೂಸಾ ನೀಡಿದ್ದಾರೆ.
ಇದರಿಂದಾಗಿ ಅವನ ಪರಿಸ್ಥಿತಿ ಗಂಭೀರವಾಗಿದ್ದು, ಸದ್ಯ ಚಿಕಾಗೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ 35 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇವಿಡ್ ಸಹ ಖೈದಿಗಳ ಆಕ್ರೋಶಕ್ಕೆ ಗುರಿಯಾಗಿದ್ದ ಹಿನ್ನಲೆಯಲ್ಲಿ ಅವನಿಗೆ ಚೆನ್ನಾಗಿ ಥಳಿಸಿದ್ದಾರೆ.
ಇದರಿಂದಾಗಿ ಆತನ ಆರೋಗ್ಯದಲ್ಲಿ ಏರುಪೇರಾಗಿದೆ. ಜುಲೈ 8ರಂದು ಈ ಘಟನೆ ನಡೆದಿದ್ದು, ಈ ಕುರಿತು ಅಮೆರಿಕ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


