ರಾಜ್ಯ

ಶಿಕ್ಷಣ ಇಲಾಖೆಗೆ ಬಂತು ಪ್ರತ್ಯೇಕ ಸಂಗೀತ ಆಲ್ಬಮ್!

ಬೆಂಗಳೂರು : ಉದಯೋನ್ಮುಖ ಗಾಯಕ ಮತ್ತು ಸಂಗೀತ ನಿರ್ದೇಶಕ ಆಶಿಶ್ ಲಕ್ಕಿ ದುಬೆ ಅವರ “ಆಶಿಶ್-ಮ್ಯೂಸಿಕ್ ಫಾರ್ ಎ ಬ್ರೇಟರ್ ಉಷಾ’’ ಎಂಬ ವಿನೂತನವಾದ ಆಲ್ಬಂ ನ್ನು ಶಿಕ್ಷಣ ಇಲಾಖೆ ತನ್ನ ಇಲಾಖೆಯ ಆಲ್ಬಂ ಆಗಿ ಅಳವಡಿಸಿಕೊಂಡಿದೆ. ಈ ಗೀತೆಗೆ ಗ್ರಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರು ಸಂಗೀತ ನೀಡಿದ್ದಾರೆ.

ಈ ಗೀತೆಯ ವೈಶಿಷ್ಟತೆ ಮತ್ತು ಸೌಂದರ್ಯವೆಂದರೆ ಮಕ್ಕಳು ಕೇಂದ್ರಬಿಂದುವಾಗಿದ್ದಾರೆ.

ಆಶಿಶ್ ದುಬೆ ಮತ್ತು ಗ್ರಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್ ಅವರು ನಿರ್ಮಿಸಿರುವ ಐದು ಹಾಡುಗಳಿದ್ದು, ಇದರಲ್ಲಿ ಎರಡು ಕನ್ನಡ ಗೀತೆಗಳಿವೆ. ಮತ್ತೆ ಎರಡು ರೀಮಿಕ್ಸ್ ಮತ್ತು ಒಂದು ಹಾಡು ಇಂಗ್ಲೀಷ್ ಭಾಷೆಯದ್ದಾಗಿದೆ.

ನಟ ಪುನೀತ್ ರಾಜ್‌ಕುಮಾರ್ ಮತ್ತು ಕ್ರಿಕೆಟ್ ತಾರೆ ಅನಿಲ್ ಕುಂಬ್ಳೆ ಅವರು ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದು ವಿಶೇಷವಾಗಿತ್ತು.ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು (ಎಸ್ ಡಿ ಜಿ) ಗಮನದಲ್ಲಿಟ್ಟುಕೊಂಡು ಈ ಗೀತೆಗಳನ್ನು ರಚಿಸಲಾಗಿದೆ. ಮಕ್ಕಳ ಶಿಕ್ಷಣದ ಹಕ್ಕು, ಆರೋಗ್ಯ, ಪರಿಸರ ರಕ್ಷಣೆ ಮತ್ತು ಹೆಣ್ಣು ಮಕ್ಕಳ ಶಿಕ್ಷಣದ ಹಕ್ಕು, ನೈರ್ಮಲ್ಯ ಹಾಗೂ ಜೀವನ ಶೈಲಿಯ ಆರೋಗ್ಯ ಸೇರಿದಂತೆ ಒಟ್ಟಾರೆ ಮಕ್ಕಳ ಹಿತರಕ್ಷಣೆಗೆ ಪೂರಕವಾದ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ಗೀತೆಗಳನ್ನು ರಚಿಸಲಾಗಿದೆ.

ಆಶಿಶ್ ಲಕ್ಕಿ ಅವರು ಸೆಪ್ಟೆಂಬರ್ ೫ ಶಿಕ್ಷಕರ ದಿನಾಚರಣೆಯಂದು ಸಂಗೀತ ನೀಡಿ ಹಾಡಿರುವ ಇನ್ನೊಂದು ಹಾಡನ್ನು ಕರ್ನಾಟಕ ಶಿಕ್ಷಣ ಇಲಾಖೆ ತನ್ನ ಗೀತೆಯನ್ನಾಗಿ ಅಳವಡಿಸಿಕೊಂಡಿದೆ.

ಮೊದಲ ಬಾರಿಗೆ ಆಶಿಶ್ ಗೀತೆಗಳನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗಿತ್ತು. ಈ ಗೀತೆಗಳನ್ನು ಕೇಳಿದ ಕುಮಾರಸ್ವಾಮಿ ಅವರು ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಈ ಗೀತೆಗಳನ್ನು ಹೊರ ತಂದಿರುವ ಆಶಿಶ್ ಅವರ ಕಾರ್ಯವನ್ನು ಶ್ಲಾಘಿಸಿದ್ದರು.

ಈ ಬಗ್ಗೆ ಮಾತನಾಡಿದ ಆಶಿಶ್ ಅವರು, “ಸಂಗೀತವೆಂಬುದು ಇಡೀ ವಿಶ್ವಕ್ಕೆ ಆತ್ಮವನ್ನು ನೀಡಿದೆ. ಮನಸಿಗೆ ರೆಕ್ಕೆಯನ್ನು, ಚಿಂತನೆಯನ್ನು ಹಾರುವಂತೆ ಮತ್ತು ಪ್ರತಿಯೊಂದಕ್ಕೂ ಜೀವ ತುಂಬಿದೆ’’ ಎಂದರು.

ಆಶಿಶ್ ಅವರು ಈ ಹಿಂದೆ ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಮತ್ತು ಕನ್ನಡದ ಸಂಗೀತ ನಿರ್ದೇಶಕ ಮನೋಮೂರ್ತಿ ಅವರೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ನೀಡಿದ ಅನುಭವ ಹೊಂದಿದ್ದಾರೆ.

Please follow and like us:

Leave a Reply

Your email address will not be published. Required fields are marked *