ಅಪರಾಧ

ಆನೆ ತುಳಿದು ವ್ಯಕ್ತಿ ಸಾವು

ಚಾಮರಾಜನಗರ : ಆನೆ ತುಳಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದ ‍ಘಟನೆ ಚಾಮರಾಜನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಚಾಮರಾಜನಗರ ತಾಲೂಕಿನ ಕಾಳಿಕಾಂಬ ಕಾಲೋನಿ ಸಮೀಪದ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸೌದೆ ತರಲು ಕಾಡಿಗೆ ಚಿಕ್ಕಮಾದಶೆಟ್ಟಿ ಎಂಬುವರು ಹೋಗಿದ್ದರು. ಅವರನ್ನು ಆನೆ ತುಳಿದಿದೆ. ಹೀಗಾಗಿ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ವ್ಯಕ್ತಿಯ ಶವವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರಿಕ್ಷೆ ನಡೆಸಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ.

ಈ ಕುರಿತು ಚಾಮರಾಜನಗರದ ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರಣ್ಯ ಇಲಾಖೆ ಮೃತ ಚಿಕ್ಕಮಾದಶೆಟ್ಟಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *