ರಾಜ್ಯ

ಸುಲ್ವಾಡಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಚೆನ್ನೈನಿಂದ ವಾಪಸಾದ ತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಚಾಮರಾಜನಗರ ಜಿಲ್ಲೆಯ ಸುಲ್ವಾಡಿ ಗ್ರಾಮದ ಘಟನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

ಮೃತ ಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.

ಬಳಿಕ ಮುಖ್ಯಮಂತ್ರಿಗಳು ಕೂಡಲೇ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿ ಕೆ.ಆರ್. ಆಸ್ಪತ್ರೆ ಹಾಗೂ ಜೆ ಎಸ್ ಎಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಅಸ್ವಸ್ಥರನ್ನು ಭೇಟಿ ಮಾಡಿದರು.

ಮೈಸೂರಿನಿಂದ 15 ಅಂಬ್ಯುಲೆನ್ಸ್ ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವಂತೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾಧಿಕಾರಿ ಗಳಿಗೆ ಸೂಚಿಸಿದರು.

ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ, ಲೋಕಸಭಾ ಸದಸ್ಯರಾದ ಆರ್.ಧ್ರುವ ನಾರಾಯಣ, ಶಾಸಕರಾದ ಆರ್.ನರೇಂದ್ರ ,ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶಿವಮ್ಮ ಅವರು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಉಪ ವಿಭಾಗದ ಆಸ್ಪತ್ರೆಗೆ ಭೇಟಿ ನೀಡಿ ಸುಳ್ವಾಡಿ ಪ್ರಸಾದ ಸೇವನೆ ಪ್ರಕರಣದಲ್ಲಿ ಮೃತಪಟ್ಟವರ ಶವಗಳನ್ನು ವೀಕ್ಷಿಸಿದರು.

ಮೃತ ಸಂಬಂಧಿಕರಿಗೆ ಸಾಂತ್ವನ ಹೇಳಿದರು. ಅಲ್ಲದೆ ಸಚಿವಸಿ.ಪುಟ್ಟರಂಗಶೆಟ್ಟಿ ಅವರು ಸಹ ವೈಯಕ್ತಿಕ ಪರಿಹಾರ ವಿತರಿಸಿದರು.

ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವರಿಗೆ ಸರ್ಕಾರದಿಂದಲೇ ವೆಚ್ಚ ಭರಿಸುವುದಾಗಿ ಭರವಸೆ ನೀಡಿದರು.

Please follow and like us:

Leave a Reply

Your email address will not be published. Required fields are marked *