ಧಾರವಾಡ prajakiran.com : ಕೋವಿಡ್ ನಿಯಂತ್ರಣಕ್ಕಾಗಿ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಆಧರಿಸಿ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನುಕಡ್ಡಾಯವಾಗಿ ಪಾಲಿಸಬೇಕು.
ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜೆ, ಪ್ರಾರ್ಥನಾ ಮಂದಿರಗಳು, ಹೋಟೆಲ್ಗಳು ಮತ್ತು ಇತರೆ ಆತಿಥ್ಯ ಸೇವೆಗಳು, ರೆಸ್ಟೊರೇಂಟ್ ಹಾಗೂ ಶಾಪಿಂಗ್ ಮಾಲ್ಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಸರ್ ಮತ್ತು ಮಾಸ್ಕ್ಗಳ ಬಳಕೆ ಸೇರದಂತೆ ಸರ್ಕಾರದ ಎಲ್ಲಾ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಅಲ್ಲದೆ, ಅದರಲ್ಲೂ ವಿಶೇಷವಾಗಿ ೧೦ ವರ್ಷದೊಳಗಿನ ಮಕ್ಕಳು ಹಾಗೂ ೬೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮನೆಗಳಿಂದ ಹೊರಬರದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ವಿವರಿಸಿದ್ದಾರೆ.
