ನವದೆಹಲಿ prajakiran.com : ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟದ ಪುನರ್ ರಚನೆ ಇಂದು ಸಂಜೆ 6ಕ್ಕೆ ನಡೆಯಲಿದ್ದು, ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ದೊರಕಿದೆ.
ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಬೀದರ್ ಸಂಸದ ಭಗವಂತ ಖೂಬಾಗೆ ಕೇಂದ್ರ ಸಚಿವ ಸ್ಥಾನ ಒಲಿದಿದೆ.
ಪ್ರಧಾನಿ ಕಚೇರಿಯಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಅವರು ಹೈದ್ರಾಬಾದ್ ಮೂಲಕ ದೆಹಲಿಗೆ ತೆರಳಿದ್ದಾರೆ.
ಹೈಕಮಾಂಡ್ ಸೂಚನೆಯಂತೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ, ಆರೋಗ್ಯ ಸಚಿವ ಡಾ. ಹರ್ಷವರ್ಧನ, ಸಾಮಾಜಿಕ ನ್ಯಾಯವಸಚಿವ ತಾವರ್ ಚಂದ್ ಗ್ಲೆಹೋಟ್ ರಾಜೀನಾಮೆ ನೀಡಿದ್ದಾರೆ.


