ಅಪರಾಧ

ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನ ಬಂಧನ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗಾಂಜಾ ಮಾರಾಟ ಮತ್ತು ಸಾಗಾಟ ಮಾಡುವವರ ವಿರುದ್ಧ ಪೊಲೀಸ್ ಸಮರ ಇನ್ನೂ ಮುಂದುವರೆದಿದೆ.

ಭಾನುವಾರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಬಂಧಿಸುವಲ್ಲಿ ಇಲ್ಲಿನ ಎಪಿಎಂಸಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಬಿ ಅರಳಿಕಟ್ಟಿಯ ಜುಬೇರ ಮನಾಪಸಾಬ್ ಹಕೀಂ ಎಂದು ಗುರುತಿಸಲಾಗಿದೆ.ಬಂಧಿತ ಜುಬೇರನಿಂದ 490 ಗ್ರಾಂ ತೂಕದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಎಪಿಎಂಸಿ ಠಾಣೆ ಇನ್ಸ್ ಪೆಕ್ಟರ್ ಎಸ್ ಆರ್ ನಾಯಕ‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Please follow and like us:

Leave a Reply

Your email address will not be published. Required fields are marked *