ರಾಜ್ಯ

ಹಾಸನ ಮಾಜಿ ಶಾಸಕ ಹೆಚ್.ಎಸ್ ಪ್ರಕಾಶ ಇನ್ನಿಲ್ಲ

ಹಾಸನ : ಹಾಸನ ಜಿಲ್ಲೆ ಜೆಡಿಎಸ್ ನ ಪ್ರಭಾವಿ ಮುಖಂಡ ಹಾಗೂ ಹಾಸನ ವಿಧಾನ ಸಭಾ ಮತಕ್ಷೇತ್ರದ ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ ವಿಧೀವಶರಾಗಿದ್ದಾರೆ.

ಅವರು ಹಾಸನ ನಗರ ಸಭೆ ಮೂಲಕ ರಾಜಕೀಯ ಪ್ರವೇಶ ಮಾಡಿ, ನಾಲ್ಕು ಬಾರಿ ವಿಧಾನ ಸಭೆ ಪ್ರವೇಶ ಮಾಡಿದ್ದರು.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.

ಕಳೆದ ಚುನಾವಣೆಯಲ್ಲಿ ಹಾಸನ ವಿಧಾನ ಸಭಾ ಮತಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಗೌಡ ವಿರುದ್ದ ಸೋಲು ಅನುಭವಿಸಿದ್ದ ಅವರು ಹಾಸನ ಶಾಸಕ ಪ್ರೀತಂಗೌಡ ವಿರುದ್ದ ಭೂ ಕಬಳಿಕೆ ಆರೋಪ ಮಾಡಿದ್ದರು.

ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಕ್ಷೇತ್ರ ಹಾಸನಕ್ಕೆ ಪ್ರಾರ್ಥೀವ ಶರೀರವನ್ನು ಕರೆ ತಂದು ಸಂಜೆ ವೇಳೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಮಾಜಿ ಶಾಸಕ ಹೆಚ್.ಎಸ್. ಪ್ರಕಾಶ ಅವರ ನಿಧನಕ್ಕೆ ಹಾಸನ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.

Please follow and like us:

Leave a Reply

Your email address will not be published. Required fields are marked *