ರಾಜ್ಯ

ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಕುಮಾರಸ್ವಾಮಿ

ಕೊಡಗು : ಕೊಡಗು ಜಿಲ್ಲೆಯ ಹಾರಂಗಿ ಜಲಾಶಯಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಸಮೇತ ಸಮೇತ ಬಾಗೀನ ಅರ್ಪಿಸಿದರು.

ಬಳಿಕ ಮಾತನಾಡಿದಅವರು 37 ವರ್ಷಗಳ ನಂತರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಇದರಿಂದಾಗಿ ಜಿಲ್ಲೆಯ ಎಲ್ಲ ನದಿ ಹಾಗೂ ಜಲಾಶಯಗಳು ತುಂಬಿ ಹರಿಯುತ್ತಿವೆ. ದೇವರ ಅನುಗ್ರಹದಿಂದ ರಾಜ್ಯದ ಎಲ್ಲ ಜಲಾಶಯಗಳು ಕೂಡ ಭರ್ತಿಯಾಗಿವೆ ಎಂದರು.

ಅವರಿಗೆ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ, ಸಹೋದರ ಹಾಗೂ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಸಾಥ್ ನೀಡಿದರು.

ನಾಳೆ ಜುಲೈ 20ರಂದು ಮೈಸೂರು ಜಿಲ್ಲೆಯ ಪ್ರವಾಸ ಮಾಡಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೃಷ್ಣರಾಜಸಾಗರ ಜಲಾಶಯದಲ್ಲಿ ಬಾಗೀನ ಸಲ್ಲಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಈವರೆಗೆ ಮೈಸೂರು ರಾಜಮನೆತನದವರಿಗೆ ಅಧಿಕೃತ ಆಹ್ವಾನ ನೀಡಿಲ್ಲ. ಹೀಗಾಗಿ ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಅರಸು ಮನೆತನದವರು ಪಾಲ್ಗೊಳ್ಳುತ್ತಾರೆಯೇ ಇಲ್ಲವೇ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

Please follow and like us:

Leave a Reply

Your email address will not be published. Required fields are marked *