ರಾಜ್ಯ

ಕಾಂಗ್ರೆಸ್ ವಿರುದ್ದ ಬೇಸರ ಹೊರ ಹಾಕಿದ ಬಸವರಾಜ ಹೊರಟ್ಟಿ

ಬೆಳಗಾವಿ : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಅಧ್ಯಕ್ಷ ಸ್ಥಾನ ಕೈ ತಪ್ಪುತ್ತಿದ್ದಂತೆ ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ನಾಯಕರ ನಡವಳಿಕೆ ವಿರುದ್ದ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಕಾಂಗ್ರೆಸ್ ಜೆಡಿಎಸ್ ಸಮ್ಮೀಶ್ರ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ವಿಧಾನ ಸಭೆ ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್ ಗೆ ಹಾಗೂ ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು.

ಆದರೆ ಎಲ್ಲೋ ಒಂದು ಕಡೆ ಲಾಭಿ ನಡೆದಿದೆ. ಮುಖ್ಯಮಂತ್ರಿಗಳ ಮಾತನ್ನು ಕೇಳುವ ಸೌಜನ್ಯ ಕಾಂಗ್ರೆಸ್ ನಾಯಕರು ತೋರಲಿಲ್ಲ ಎಂದು ನೇರವಾಗಿ ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ತನ್ನ ನೀತಿಗಳಿಗೆ ವಿರುದ್ದವಾಗಿ ನಡೆದುಕೊಂಡಿದೆ. ಬಹುಮತ ಇದೆ ಎಂದು ಅವರು ತಪ್ಪು ತಿಳಿದುಕೊಂಡಿದ್ದಾರೆ. ಅವರು ನಮ್ಮೆಲ್ಲರ ಮೈತ್ರಿ ಧರ್ಮ ಪಾಲಿಸಲಿಲ್ಲ. ಏಕಧರ್ಮಿಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರು ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದರೂ, ನಿನಗೆ ಬಿಟ್ಟರೆ ಯಾರಿಗೂ ವಿಧಾನ ಪರಿಷತ್ ಸಭಾಪತಿ ಸ್ಥಾನ ಇಲ್ಲ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್ ನುಡಿದಂತೆ ನಡೆದುಕೊಳ್ಳಲಿಲ್ಲ.

ಹೀಗಾಗಿ ಜೆಡಿಎಸ್ ಗೆ ದಕ್ಕಬೇಕಿದ್ದ ಸಭಾಪತಿ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ನನ್ನ ಸಭಾಪತಿ ಸ್ಥಾನ ಕೈ ತಪ್ಪಿದ್ದಕ್ಕೆ ನೇರವಾಗಿ ಕಾಂಗ್ರೆಸ್ ಕಾರಣವೇ ಹೊರತು ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಾಗಲಿ ಕಾರಣ ಅಲ್ಲವೇ ಅಲ್ಲ. ಅವರಿಬ್ಬರ ಮಾತಿಗೆ ಕಾಂಗ್ರೆಸ್ ಬೆಲೆ ಕೊಡಲಿಲ್ಲ ಎಂದು ದೂರಿದರು.

ಜೆಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಭಾಪತಿ ಸ್ಥಾನ ಕೈತಪ್ಪುತ್ತಿದ್ದಂತೆ ಇದೀಗ ಜೆಡಿಎಸ್ ಪಾಳೇಯದಲ್ಲಿ ಸಹ ಅಸಮಾಧಾನ ಹೊಗೆ ಆಡುತ್ತಿದೆ. ಈ ಬಗ್ಗೆ ಜೆಡಿಎಸ್ ಮುಖಂಡರು ಯಾವ ರೀತಿ ಪ್ರತಿಕ್ರಿಯಿಸಿತ್ತಾರೆ. ಮತ್ತು ಅಸಮಾಧಾನವನ್ನು ಯಾವ ರೀತಿ ತಣ್ಣಗಾಗಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.

Please follow and like us:

Leave a Reply

Your email address will not be published. Required fields are marked *