ರಾಜ್ಯ

ಕರ್ನಾಟಕ ಬಂದ್ ಹಲವಡೆ ಬಿರುಸು, ನೂರಾರು ಪ್ರತಿಭಟನಾಕಾರರು ಪೊಲೀಸರ ವಶಕ್ಕೆ

ಬೆಂಗಳೂರು prajakiran.com : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹಲವು ಜಿಲ್ಲೆಗಳಲ್ಲಿ ಬಿರುಸಿನ ಕಾವು ಪಡೆದಿದ್ದರೆ, ಇನ್ನು ಹಲವಡೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು, ಧಾರವಾಡ, ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೆ.ಆರ್. ಪುರಂ ನಲ್ಲಿ ನೂರಾರು ಪ್ರತಿಭಟನಾಕಾರರನ್ನು ಪೊಲೀಸರು ಮುಂಜಾಗ್ರತ ಕ್ರಮವಾಗಿ ವಶಕ್ಕೆ ಪಡೆದರು.

ಬಿಎಂಟಿಸಿ ಬಸ್ ನಲ್ಲಿ ಅವರನ್ನು ಕರೆದುಕೊಂಡು ಹೋಗಲಾಯಿತು. ಕೆಲವಡೆ ಬಲವಂತದ ಬಂದ್ ಕೂಡ ಕಂಡು ಬಂತು.

ಧಾರವಾಡದ ಆಲೂರು ವೆಂಕಟರಾಯರ ವೃತ್ತದಲ್ಲಿ ನೂರಾರು ರೈತರು ರಸ್ತೆ ತಡೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅದೇ ರೀತಿಯಾಗಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಹಲವು ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಕೆಲವಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ವಾಹನ ಸಂಚಾರ ವಿರಳವಾಗಿದ್ದು, ತರಕಾರಿ, ಕಿರಣಾ ಅಂಗಡಿಗಳು ಬಂದ್ ಆಗಿವೆ. ಕೆಲವಡೆ ಹೋಟೆಲಗಳು ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕೂಡ ಬೆಂಬಲ ಸೂಚಿಸಿದ್ದು, ಹಲವಡೆ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *