ಧಾರವಾಡ: ಬರುವ ನವ್ಹಂಬರ್ ತಿಂಗಳಲ್ಲಿ ಧಾರವಾಡದಲ್ಲಿ ನಡೆಯಲಿರುವ 84 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜನೆ ಕುರಿತು ಆಗಸ್ಟ್ 20 ರಂದು ಸೋಮವಾರ ಮುಂಜಾನೆ 10 ಗಂಟೆಗೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಂಗಣದಲ್ಲಿ ರಾಜ್ಯ ಕ.ಸಾ.ಪ. ಅಧ್ಯಕ್ಷ ಡಾ. ಮನು ಬಳಿಗಾರ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಧಾರವಾಡ ಜಿಲ್ಲೆಯ ಎಲ್ಲ ಸರಕಾರಿ ಇಲಾಖೆಗಳ, ಕನ್ನಡ ಪರ ಸಂಘಟನೆಗಳ, ಮಹಿಳಾ ಮಂಡಳಗಳ, ಸಾಂಸ್ಕಂತಿಕ ಸಂಘಗಳ, ನೌಕರರ ಸಂಘಗಳ ಮುಖ್ಯಸ್ಥರು ಮತ್ತು ಜಿಲ್ಲೆಯ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲೂಕು ಪಂಚಾಯತ ಪ್ರತಿನಿಧಿಗಳು, ಸಾಹಿತಿಗಳು, ಸಮೂಹ ಮಾಧ್ಯಮ ಮತ್ತು ಆಕಾಶವಾಣಿ, ದೂರದರ್ಶನ ಪ್ರತಿನಿಧಿಗಳು, ಕನ್ನಡದ ಸಹೃದಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆ ಮಾರ್ಗದರ್ಶನ ಮಾಡಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ ಮನವಿ ಮಾಡಿದ್ದಾರೆ.
ಧಾರವಾಡ : ಇಲ್ಲಿಯ ವಿದ್ಯಾರಣ್ಯ ಪ್ರೌಢ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಕ್ಕಳ ಅಕಾಡೆಮಿಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶಾಲಾ ವಿದ್ಯಾರ್ಥಿಗಳ ದಂತ ತಪಾಸಣೆ ಹಾಗೂ ಬಾಯಿ ಆರೋಗ್ಯ ಜಾಗೃತಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ವಾಯವ್ಯ ಕರ್ನಾಟಕ ಶೈಕ್ಷಣಿಕ ವಲಯದ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿ, ಶ್ರೇಷ್ಠ ಮಾನವ ಸಂಪನ್ಮೂಲದ ಬೆಳವಣಿಗೆಯಲ್ಲಿ ಮಕ್ಕಳ ಪಾಲು ಬಹು ದೊಡ್ಡ ಸಂಖ್ಯೆಯಲ್ಲಿರುವುದು ಅಗತ್ಯವಾಗಿದೆ. ಆರೋಗ್ಯವಂತ ಮಕ್ಕಳ ಮೇಲೆ ಭಾರತದ ಭವಿಷ್ಯ ಅಡಗಿದೆ. […]
ಧಾರವಾಡ : ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯನ್ನಾಗಿ ಮಾಡಲಾಗುವುದು ಎಂದು ಹೇಳಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಶಿವಸೇನಾ ಮುಖ್ಯಸ್ಥ ಉದ್ಧವ ಠಾಕ್ರೆ ತಕರಾರು ತೆಗೆದಿರುವುದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಭಾವಚಿತ್ರ ಚಿತ್ರ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು ಉದ್ಭವ ಠಾಕ್ರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಬಹಿರಂಗ ಹೇಳಿಕೆ ನೀಡಿರುವುದಕ್ಕೆ ಸಮಸ್ತ ಕರ್ನಾಟಕದ ಜನತೆಗೆ ಕ್ಷಮೆ ಯಾಚಿಸಬೇಕು. ಅಲ್ಲದೆ, ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಂಪಡೆಯಬೇಕು. […]
ಧಾರವಾಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅತಿವೃಷ್ಟಿಯಿಂದ ಜನ ಜೀವನ ಅಸ್ತವ್ಯಸ್ಥವಾಗಿದೆ. ಸಂತ್ರಸ್ತರಿಗೆ ಅಲ್ಲಿಯ ನಿರಾಶ್ರಿತರಿಗೆ ಸಹಾಯ ಮಾಡಲು ಅಂಜುಮನ್ ಸಂಸ್ಥೆಯ ಕಚೇರಿಯಲ್ಲಿ ಆ. 30 ರ ಒಳಗೆ ಸ್ವ ಇಚ್ಚೆಯಿಂದ ಹಣ ನೀಡಿ ರಸೀದಿ ಪಡೆಯಬೇಕು ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಾಟಗಾರ ಮನವಿ ಮಾಡಿದ್ದಾರೆ. ಅವರು ಬುಧವಾರ ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಮಾಜ ಬಾಂಧವರನ್ನು ಉದ್ದೇಶಿಸಿ ಮಾತನಾಡಿದರು. ಆ […]