ಮಂಡ್ಯ : ತುಂಬಿ ಹರಿಯುತ್ತಿರುವ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಾಗಿನ ಅರ್ಪಿಸಿದರುಅವರಿಗೆ ಪತ್ನಿಅನಿತಾ ಕುಮಾರಸ್ವಾಮಿ ಸಾಥ್ ನೀಡಿದರು.
ಈ ಸಂದರ್ಭದಲ್ಲಿಅವರಿಗೆ ಸಚಿವರುಗಳಾದ ಡಿ.ಕೆ ಶಿವಕುಮಾರ್, ಜಿ.ಟಿ. ದೇವೇಗೌಡ, ಸಾ.ರಾ ಮಹೇಶ್, ಸಿ.ಎಸ್ ಪುಟ್ಟರಾಜು, ಡಿ.ಸಿ ತಮ್ಮಣ್ಣ ಸೇರಿದಂತೆ ಮಂಡ್ಯ, ಮೈಸೂರುಜಿಲ್ಲೆಯ ಜನಪ್ರತಿನಿಧಿಗಳು ಸಾಥ್ ನೀಡಿದರು.
ಇದಕ್ಕೂ ಮುನ್ನ ಕುಮಾರಸ್ವಾಮಿ ಅವರು ಕಬನಿ ಜಲಾಶಯಕ್ಕೂ ತೆರಳಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿ, ಬಾಗಿನ ಸಮರ್ಪಿಸಿದರು. ಮಡಿಕೇರಿ ಜಿಲ್ಲೆಯ ಭಾಗಮಂಡಲದ ಭಗಂಡೇಶ್ವರ ಮತ್ತು ತಲಕಾವೇರಿ ದೇಗುಲಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದಂಪತಿ ಸಮೇತ ಪೂಜೆ ಸಲ್ಲಿಸಿದರು.