ಅಂತಾರಾಷ್ಟ್ರೀಯ

ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆ. ಸಿ. ರಾಮಮೂರ್ತಿ

ನವದೆಹಲಿ PRAJAKIRAN.COM : ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಕೆ. ಸಿ. ರಾಮಮೂರ್ತಿ ರಾಜೀನಾಮೆ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದು, ಮುಂದಿನ ಎರಡು ದಿನಗಳಲ್ಲಿ ಬಿಜೆಪಿ ಸೇರುವ ಬಗ್ಗೆ ನಿರ್ಧಾರ ಮಾಡ್ತೀನಿ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರಕಾರ ಹತ್ತು ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹೀಗಾಗಿ ದೇಶದ ಪ್ರಗತಿ ಜೊತೆಗೆ ನಾನು ಇರಬೇಕು ಎಂದು ರಾಜೀನಾಮೆ ನೀಡಿದ್ದೇನೆ ಎಂದರು.

ನನಗೂ ಮನಸ್ಸಿದೆ. ನಾನು ಸ್ವತಂತ್ರ್ಯವಾಗಿ ತೀರ್ಮಾನ ತೆಗೆದುಕೊಳ್ಳಬೇಕು, ನನ್ನ ಅಭಿಪ್ರಾಯಕ್ಕೆ ಮನ್ನಣೆ ಸಿಗಬೇಕು ಎಂಬ ಭಾವನೆಯಿದೆ.

ನಾನು ಇನ್ನೂ ಬಿಜೆಪಿ ಸೇರುವ ಬಗ್ಗೆ ನಿರ್ಧರಿಸಿಲ್ಲ. ಈ ಹಿಂದೆ ಬಿಜೆಪಿ ನಾಯಕತ್ವಕ್ಕೆ ಭೇಟಿ ಮಾಡಿದ್ದು ಬೇರೆ ಬೇರೆ ಕಾರಣಗಳಿಗೆ ಹೊರತು ರಾಜ್ಯಸಭೆಯಲ್ಲಿ ಬಿಜೆಪಿ ಬಿಲ್ ಪಾಸ್ ಆಗಬೇಕಿದೆ.

ಅದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುತ್ತಿದ್ದೇನೆ ಎಂಬುದು ಸಂಪೂರ್ಣ ಸುಳ್ಳು ಎಂದು ಕೆ.ಸಿ. ರಾಮಮೂರ್ತಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೆ ಆಸಕ್ತಿ ಹೊಂದಿರುವ ಕೆ.ಸಿ. ರಾಮಮೂರ್ತಿ ನಿರ್ಧಾರದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಮರ್ಮಾಘಾತ ನೀಡಿದಂತಾಗಿದೆ ಎಂದರೆ ತಪ್ಪಾಗಲಾರದು.

Please follow and like us:

Leave a Reply

Your email address will not be published. Required fields are marked *