ಧಾರವಾಡ Prajakiran.com : ಕಬ್ಬಿನ ಟ್ರಾಕ್ಟರ್ ಅಡಿ ಸಿಲುಕಿ ಐದನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಕಮಲಾಪುರ ಉರ್ದು ಶಾಲೆ ಬಳಿ ಈ ಘಟನೆ ಸಂಭವಿಸಿದ್ದು, ಶಾಲೆಯ ಬಳಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ನಿಲ್ಲಿಸಿದ್ದ ಚಾಲಕ.
ಈ ವೇಳೆ ಟ್ರ್ಯಾಕ್ಟರ್ ನಲ್ಲಿನ ಕಬ್ಬು ಕೀಳಲು ಹೋಗಿ ಬಾಲಕ ಅದರ ಅಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಇದರಿಂದಾಗಿ ಆತಂಕಗೊಂಡ ಚಾಲಕ ಸ್ಥಳದಲ್ಲಿಯೇ ಟ್ರ್ಯಾಕ್ಟರ್ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.
ಕಬ್ಬಿನ ಟ್ರ್ಯಾಕ್ಟರ್ ಅಡಿ ಸಿಲುಕಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು
ಸುಲೇಮಾನ ಕಲಾದಗಿ ಎಂದು ಗುರುತಿಸಲಾಗಿದ್ದು, ಈತ ಧಾರವಾಡದ
ಕಮಲಾಪೂರ ಉರ್ದು ಶಾಲೆಯಲ್ಲಿ 5 ನೇ ತರಗತಿ ಓದುತ್ತಿದ್ದ.
ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ರಸ್ತೆ ಬದಿ ನಿಂತಿದ್ದ
ಕಬ್ಬು ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ ಬಳಿ ಹೋಗಿ ಕಬ್ಬು ಕೀಳುವಾಗ ಚಕ್ರದಡಿ ಸಿಲುಕಿ ಸ್ಥಳದಲ್ಲಿ ಮೃತ ಪಟ್ಟಿದ್ದಾನೆ.
ಈ ಕುರಿತು ಧಾರವಾಡದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.