ಧಾರವಾಡ prajakiran.com : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ 160, ಎಸ್ಡಿಎಂನಲ್ಲಿ 4, ಹಾಗೂ ಸಂಜೀವಿನಿ ಆಯುರ್ವೇದ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ನಲ್ಲಿ 22 ಸೇರಿ ಒಟ್ಟು 186 ಸಕ್ರಿಯ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ತಿಳಿಸಿದರು.
ಜುಲೈ 1 ರಂದು ವರದಿಯಾದ ತೀವ್ರ ಉಸಿರಾಟದ ತೊಂದರೆ ಇರುವ ಎಲ್ಲಾ 8 ಪ್ರಕರಣಗಳು ಹಾಗೂ 90 ಐಎಲ್ಐ ಪ್ರಕರಣಗಳಲ್ಲಿ 75 ಪ್ರಕರಣಗಳನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ ಎಂದು ನೀಡಿದರು.
ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ :
ಇಲ್ಲಿನ ಜಿಲ್ಲಾಸ್ಪತ್ರೆಗೆ ನೂತನ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಅವರು ಭೇಟಿ ನೀಡಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆಗಳ ಸಾಮರ್ಥ್ಯದ ನವಜಾತ ಶಿಶುಗಳ ಆಸ್ಪತ್ರೆ ಹಾಗೂ 115 ಹಾಸಿಗೆಗಳಿಗೆ ಆಮ್ಲಜನಕ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಿದರು.
ಆಸ್ಪತ್ರೆಯ ತಜ್ಞವೈದ್ಯರು, ಸಿಬ್ಬಂದಿ ಹಾಗೂ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಈ ಕುರಿತು ಅಗತ್ಯ ಮಾಹಿತಿ ಪಡೆದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ: ಶಿವಕುಮಾರ ಮಾನಕರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ: ಯಶವಂತ ಮದೀನಕರ, ಕೆ.ಹೆಚ್.ಎಸ್. ಆರ್ಡಿಪಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ಸುರೇಶ್ ಮತ್ತಿತರರು ಇದ್ದರು.
