ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಯಾವುದೇ ನೆಲೆಯಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಜೆಡಿಎಸ್ ನಾಯಕರು ಮನೆಯಲ್ಲಿದ್ದವರನ್ನು ಕರೆದು ಟಿಕೇಟ್ ನೀಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ತಮ್ಮ ಸಹೋದರ ಮಧು ಬಂಗಾರಪ್ಪ ವಿರುದ್ದವೇ ಗುಡುಗಿದ್ದಾರೆ.
ಅವರು ಸೋಮವಾರ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದರು. ಲೋಕಸಭೆಯಲ್ಲಿ ಜೆಡಿಎಸ್ ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ಕಳೆದ ಬಾರಿ ಎರಡು ಡಮ್ಮಿ ಕ್ಯಾಡೆಂಟ್ ಹಾಕಲಾಗಿತ್ತು ಎಂದು ಸಹೋದರಿ ಗೀತಾ ಶಿವರಾಜಕುಮಾರ ಅವರಿಗೆ ಕಣಕ್ಕೆ ಇಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕುಟುಕಿದರು. ಈ ಉಪಚುನಾವಣೆಯಲ್ಲಿ ಜೆಡಿಎಸ್ ಮತ್ತೇ ಧೂಳಿಪಟವಾಗಲಿದೆ ಎಂದು ಕುಮಾರ ಬಂಗಾರಪ್ಪ ಭವಿಷ್ಯ ನುಡಿದಿದ್ದಾರೆ.
ಒಟ್ಟಾರೆ ಶಿವಮೊಗ್ಗ ಲೋಕಸಭೆ ಉಪಚುನಾವಣೆ ಕಣ ರಂಗೇರುವ ಮುನ್ನವೇ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಹಾಗೂ ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ಅವರ ನಡುವೆ ಸಹೋದರರ ಸವಾಲ್, ಜವಾಬ ಹಾಗೂ ಜಂಗಿಕುಸ್ತಿ ಆರಂಭವಾಗುವ ಮುನ್ಸೂಚನೆ ದೊರೆತಿದೆ.
