ಬೆಂಗಳೂರು : ಕೊನೆಗೂ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಸ್ಥಾನದಿಂದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಕೋಕ್ ನೀಡಲಾಗಿದೆ.
ಅವರ ಸ್ಥಾನಕ್ಕೆ ಮೈಸೂರಿನ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ ಅವರನ್ನು ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶ ಹೊರಡಿಸಿದ್ದಾರೆ.
ಪುಷ್ಪಾ ಅಮರ್ ನಾಥ ಅವರು ಮೂಲತಃ ಮೈಸೂರು ಜಿಲ್ಲೆಯವರಾಗಿದ್ದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ಸಿದ್ದರಾಮಯ್ಯ ಅವರ ಬೆಂಬಲದಿಂದಲೇ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ ಎನ್ನಲಾಗಿದೆ.
ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಇನ್ನೊಂದು ಅವಧಿಗೆ ಮುಂದುವರೆಸುವಂತೆ ಅನೇಕರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು. ಅಲ್ಲದೆ. ಲಕ್ಷ್ಮೀ ಹೆಬ್ಬಾಳಕರ್ ಕೂಡ ನೇಮಕಗೊಳ್ಳಲು ಬಯಸಿದ್ದರು. ಲೋಕಸಭಾ ಚುನಾವಣೆ ಮುಗಿಯುವರೆಗೂ ಮುಂದುವರೆಸಿ ಎಂದು ಕೋರಿದ್ದರು.
ಆದರೆ ಹೈಕಮಾಂಡ್ ಅವರನ್ನು ಮುಂದುವರೆಸಲು ನಿರಾಸಕ್ತಿ ತೋರಿದ್ದು. ಲೋಕಸಭಾ ಚುನಾವಣೆ ಮುನ್ನವೇ ಐದು ಆಕಾಂಕ್ಷಿಗಳ ಪೈಕಿ ಇವರಿಗೆ ಪುಷ್ಪ ಅಮರನಾಥ್ ಅವರಿಗೆ ಅದೃಷ್ಟ ಒಲಿದಿದೆ.
ಲಕ್ಷ್ಮಿ ಹೆಬ್ಬಾಳಕರ್ ಅವರು ಸತೀಶ ಜಾರಕಿಹೊಳಿ ಹಾಗೂ ರಮೇಶ ಜಾರಕಿಹೊಳಿ ಸಹೋದರರ ನಡುವೆ ಕದನ ಕುತೂಹಲವೂ ಅವರನ್ನು ಕೈ ಬಿಡಲು ಕಾರಣ ಎಂದು ಕಾಂಗ್ರೆಸ್ ಪಾಳೇಯದಲ್ಲಿ ವಿಶ್ಲೇಷಿಸಲಾಗುತ್ತಿದೆ.