ಬೆಳಗಾವಿ Prajakiran.com : ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರನಲ್ಲಿ ನಡೆದಿದೆ.
ಈ ಭೀಕರ ರಸ್ತೆ ಅಪಘಾತ ಕಿತ್ತೂರು ತಾಲೂಕಿನ ತಿಮ್ಮಾಪೂರ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ನಿಂತ್ತಿದ್ದ ಲಾರಿಗೆ ವೇಗವಾಗಿ ಬಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಕಿತ್ತೂರು ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈ ಗೊಂಡಿದ್ದಾರೆ.
ಕಾರ್ ನಜ್ಜು ಗುಜ್ಜಾಗಿರುವುದರಿಂದ ಅಜ್ಜಿಯ ದೇಹವನ್ನು ಹೊರ ತೆಗೆಯಲಾರದ ಸ್ಥಿತಿ ನಿರ್ಮಾಣವಾಗಿದೆ.
ಈ ಅಪಘಾತದಲ್ಲಿ ಸಾವನ್ನಪ್ಪಿದವರ ಹೆಸರು ಇನ್ನಷ್ಟೆ ತಿಳಿದು ಬರಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.