ರಾಜ್ಯ

ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ಆಡಳಿತಾತ್ಮಕ ಒಪ್ಪಿಗೆ

ಬೆಂಗಳೂರು prajakiran.com : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ‌ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಲಪ್ರಭಾ ನದಿಗೆ ತಿರುಗಿಸುವ ಕಳಸಾ ನಾಲಾ ತಿರುವು ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಹಾಗೆಯೇ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನೆರಸೆ ಗ್ರಾಮದ ಬಳಿ ಬಂಡೂರ ಹಳ್ಳಕ್ಕೆ ಅಣೆಕಟ್ಟು ನಿರ್ಮಿಸಿ, ಕೂಡು ಕಾಲುವೆ ಮುಖಾಂತರ 2.18 ಟಿ ಎಂ ಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಲು ಮಲಪ್ರಭಾ ನದಿಗೆ ತಿರುಗಿಸುವ ಬಂಡೂರಿ ನಾಲಾ ತಿರುವು ಯೋಜನೆಗೂ ಆಡಳಿತಾತ್ಮಕ ಅನುಮೋದನೆ‌ ನೀಡಿದೆ‌.

ಮಹತ್ವಾಕಾಂಕ್ಷೆಯ ಈ ಕಳಸಾ - ಬಂಡೂರಿ ಕುಡಿಯುವ ನೀರಿನ‌ ಯೋಜನೆಗಳ ವಿಸ್ತೃತ ಯೋಜನಾ ವರದಿಗೆ ತಾತ್ವಿಕ ಆಡಳಿತಾತ್ಮಕ‌ ಅನುಮೋದನೆ‌ ನೀಡಿದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರನ್ನು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ಅಭಿನಂದಿಸಿದ್ದಾರೆ.

ರಾಜ್ಯ ಸರ್ಕಾರವು ಒಂದು ವರ್ಷದ ಅವಧಿಯನ್ನು ಪೂರ್ಣಗೊಳಿಸುತ್ತಿರುವ ಈ ಸುಸಂದರ್ಭದಲ್ಲಿ ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿದ್ದ ಈ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಈ ಸರ್ಕಾರ ಕಟಿಬದ್ಧವಾಗಿದೆ‌.

ಶೀಘ್ರದಲ್ಲಿಯೇ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ಯೋಜನೆಯ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

 

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *