ರಾಜ್ಯ

ಮಂಡ್ಯದಲ್ಲಿ ಭಾರೀ ಪ್ರತಿಭಟನೆ, ಬಂದ್, ನಿಷೇದಾಜ್ಞೆ…..

ಮಂಡ್ಯ: ಮಂಡ್ಯದ ಗಂಡು, ಹಿರಿಯ ನಟ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ತವರು ನೆಲಕ್ಕೆ ತರಲೇ ಬೇಕು ಎಂದು ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.

ಅಂತಿಮ ದರ್ಶನಕ್ಕಾಗಿ ಮಂಡ್ಯದಲ್ಲಿ ಅವಕಾಶ ಕಲ್ಪಿಸಲೇಬೇಕು ಎಂಬ ಒತ್ತಡ ಕ್ಷಣ ಕ್ಷಣಕ್ಕೂ ಕಾವು ಪಡೆಯುತ್ತಿದೆ.

ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಿದ ಅವರ ಅಪಾರ ಅಭಿಮಾನಿಗಳು, ಸಂಜಯ ವೃತ್ತದಲ್ಲಿ ಜಮಾಯಿಸಿ ನಡೆಸಿ, ಅಂಬರೀಶ್ ಪರ ಘೋಷಣೆ ಕೂಗಿದರು.

ಈ ಕುರಿತಂತೆ ಅಳಲು ತೋಡಿಕೊಂಡಿರುವ ಅವರ ಅಪಾರ ಅಭಿಮಾನಿಗಳು, ಅಂಬರೀಶಣ್ಣ ಮಂಡ್ಯದಲ್ಲೇ ಹುಟ್ಟಿ ಬೆಳೆದವರು. ಹೀಗಾಗಿ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತರಲೇಬೇಕು.

ಒಂದು ಗಂಟೆಯಾದರೂ ನಮ್ಮ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಿ. ಬೇಕಿದ್ದರೆ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನಲ್ಲೇ ಮಾಡಿ. ನಮ್ಮದೇನೂ ಅಭ್ಯಂತರ ಇಲ್ಲ. ನಮ್ಮ ನೋವನ್ನೂ ಅರ್ಥಮಾಡಿಕೊಳ್ಳಿ ಎಂದು ಅಳಲು ತೊಡಿಕೊಂಡಿದ್ದಾರೆ.

ಇನ್ನು, ಅಂಬರೀಷ್ ನಿಧನದ ಹಿನ್ನೆಲೆಯಲ್ಲಿ ಇಡೀ ಮಂಡ್ಯ ಜಿಲ್ಲೆಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಜಿಲ್ಲಾ ಕೇಂದ್ರದಲ್ಲಿ ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಕಂಬನಿ ಮಿಡಿದಿದ್ದಾರೆ.

ಮಂಡ್ಯದಲ್ಲಿ ಸದ್ಯ ವಾತಾವರಣ ಬಿಗುವಿನಿಂದ ಕೂಡಿದೆ. ಈ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮಂಜುಶ್ರೀ ಆದೇಶ ಹೊರಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *