ನವದೆಹಲಿ: ಪಂಚ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನಿರೀಕ್ಷಿತ ಜಯ ಸಾಧಿಸದ ಹಿನ್ನೆಲೆಯಲ್ಲಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ಸಂಜೆ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಿ ಮತ್ತೆ ಗದ್ದುಗೆ ಹಿಡಿಯಬೇಕಾದ ಅನಿರ್ವಾಯ ಇರುವುದರಿಂದ ಬಿಜೆಪಿ ಕೋರ್ ಕಮಿಟಿ ಸಭೆಗೆ ಭಾರಿ ಮಹತ್ವ ಬಂದಿದೆ.
ಅಧಿಕಾರ ಉಳಿಸಿಕೊಳ್ಳುವ ಅನಿವಾರ್ಯ ಬಿಜೆಪಿ ನಾಯಕರಿಗೆ ಇದ್ದರೆ, ಅಧಿಕಾರ ಪಡೆಯುವ ತವಕದಲ್ಲಿ ಕಾಂಗ್ರೆಸ್ ಇರುವುದರಿಂದ ಹಾಗೂ ಈಗಾಗಲೇ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢದಲ್ಲಿ ಗೆಲುವಿನ ನಗೆ ಬೀರಲಿರುವ ಕಾಂಗ್ರೆಸ್ ಪಕ್ಷ ವನ್ನು ಎದುರಿಸಬೇಕಾಗಿದೆ.
ದೇಶದಲ್ಲಡೆ ಕಾಂಗ್ರೆಸ್ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಎದುರಾಗಿರುವುದರಿಂದ ಅದನ್ನು ಸಮರ್ಥವಾಗಿ ಎದುರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಯಾವೆಲ್ಲ ತಂತ್ರ ಹೆಣೆಯುತ್ತಾರೆ. ಬಿಜೆಪಿ ನಾಯಕರಿಗೆ ಏನೆಲ್ಲಾ ಸಲಹೆ, ಸೂಚನೆ ನೀಡುತ್ತಾರೆ ಎಂಬುದು ಕಾದು ನೋಡಬೇಕಿದೆ.
