ಟಿಪ್ಪು ಸುಲ್ತಾನ್ ಜಯಂತಿಗೆ ಬಿಜೆಪಿ ವಿರೋಧ: ಜಿಲ್ಲಾಧಿಕಾರಿ ಕಚೇರಿ ಗೆ ಮುತ್ತಿಗೆ
Date : 2017-11-10 SHARE
ಧಾರವಾಡ : ರಾಜ್ಯ ಸರ್ಕಾರದ ಟಿಪ್ಪು ಸುಲ್ತಾನ್ ಜಯಂತಿ ಖಂಡಿಸಿ ಬಿಜೆಪಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೊಲೀಸರ ವರ್ತನೆ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಮತಾಂಧ ಟಿಪ್ಪು ಸುಲ್ತಾನ್ ಜಯಂತಿ ರದ್ದು ಪಡಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು. ಸಿದ್ದರಾಮಯ್ಯ ರಾಜ್ಯದ ಜನತೆಗೆ ಮಾಡಿರುವ ಅನ್ಯಾಯ ಮರೆಮಾಚಲು ಟಿಪ್ಪು ಜಯಂತಿ ಆಚರಿಸುತ್ತಿದ್ದಾರೆ. ಇದೊಂದು ನಾಟಕ, ಕಾಂಗ್ರೆಸ್ ಸರಕಾರವೂ ಇಲ್ಲದ ಕುಚೆಷ್ಟೇ ಮಾಡುವ ಮೂಲಕ ಜನರ ಭಾವನೆಗಳಿಗೆ ಧಕ್ಕೆ ಮಾಡುತ್ತಿದೆ. ಇದನ್ನ ಖಂಡಿಸುತ್ತೇನೆ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ನೀಡಿದರು. ಕೇವಲ ನಾಮಕಾವಾಸ್ತೆ : ಬಿಜೆಪಿಯ ಈ ಪ್ರತಿಭಟನೆ ಕೇವಲ ಕಾಟಾಚಾರಕ್ಕೆ ಎಂಬಂತೆ ಕಂಡು ಬಂತು. ಪ್ರತಿಭಟನಾಕಾರರ ಸಂಖ್ಯೆಗಿಂತ ಪೊಲೀಸ್ ಪಡೆ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಹನ್ನೋಂದಕ್ಕೆ ಆರಂಭವಾಗಬೇಕಿದ್ದ ಹೋರಾಟಕ್ಕೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ದೊರೆಯಲಿಲ್ಲ. ಆದರೆ ಶಾಸಕ ಅರವಿಂದ ಬೆಲ್ಲದ ಅವರು ಇದನ್ನು ಸಮರ್ಥಿಸಿಕೊಂಡರು.