ಕೆಪಿಸಿಸಿ ಸದಸ್ಯ ದೀಪಕ ಚಿಂಚೋರೆ ನೇತೃತ್ವದಲ್ಲಿ ಮನೆ ಮನೆ ಕಾಂಗ್ರೆಸ್ ಅಭಿಯಾನ
Date : 2017-11-15 SHARE
ಧಾರವಾಡ : ಇಲ್ಲಿಯ ವಾರ್ಡ ನಂ 13ರ ವ್ಯಾಪ್ತಿಯಲ್ಲಿರುವ ಬರುವ ಸಪ್ತಾಪೂರದಲ್ಲಿ ಬುಧವಾರ ಬೆಳಗ್ಗೆ ಕೆಪಿಸಿಸಿ ಸದಸ್ಯ ದೀಪಕ ಚಿಂಚೋರೆ ಅವರ ನೇತೃತ್ವದಲ್ಲಿ ಮನೆ ಮನೆ ಕಾಂಗ್ರೆಸ್ ಅಭಿಯಾನ ನಡೆಯಿತು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೈಗೊಂಡ ಅನೇಕ ಕಾರ್ಯಕ್ರಮಗಳ ಕುರಿತ ಪುಸ್ತಕಗಳನ್ನು ಮನೆ ಮನೆಗೆ ತಲುಪಿಸಲಾಯಿತು. ಕೆಪಿಸಿಸಿ ಸದಸ್ಯ ದೀಪಕ ಚಿಂಚೋರೆ ಮಾತನಾಡಿ, ಬಿಜೆಪಿಯ ನರೇಂದ್ರ ಮೋದಿಯವರ ನೋಟ್ ಬ್ಯಾನ್, ಜಿಎಸ್ಟಿ ಜಾರಿಯಿಂದಾಗಿ ಜನಸಾಮಾನ್ಯರ ಬದುಕು ಬುಡಮೇಲಾಗಿದೆ. ಪ್ರತಿಯೊಬ್ಬರ ತಲಾದಾಯ ಸಂಪೂರ್ಣವಾಗಿ ಕುಸಿದಿದೆ. ಹೀಗಾಗಿ ಅವರಿಗೆ ತಕ್ಕ ಪಾಠ ಕಲಿಸಲು ನಾಡಿನ ಜನತೆ ಮುಂಬರುವ 2018ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಆರ್ಶೀವಾದ ಮಾಡಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 165 ಭರವಸೆಗಳ ಪೈಕಿ ಈಗಾಗಲೇ 155 ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೋಮ್ಮೆ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ನೀಡಬೇಕು. ಆ ಮೂಲಕ ಸದೃಢ ಸಮೃದ್ಧ ನವ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದರು. ಈ ಮನೆ ಮನೆಗೆ ಕಾಂಗ್ರೆಸ್ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡ ಹಜರತ್ ಅಲಿ ಗೊರವನಕೊಳ್ಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬುರಾನ ಗವಳಿ, ಪ್ರಭು ಸಂಶಿ, ಮಲ್ಲಿಕಾರ್ಜುನ ಸಂಶಿ, ಬೂತ್ ಅಧ್ಯಕ್ಷರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.