ಧಾರವಾಡದಲ್ಲಿ ಧಾರಾಕಾರ ಮಳೆ : ಹಲವು ಮನೆಗಳಿಗೆ ನುಗಿದ್ದ ನೀರು
Date : 2017-11-19 SHARE
ಧಾರವಾಡ : ಇಂದು ಧಾರವಾಡದಲ್ಲಿ ಸುರಿದ ಧಾರಾಕಾರ ಮಳೆಗೆ ಹಲವು ಮನೆಗಳಿಗೆ ನೀರು ನುಗ್ಗಿತ್ತು. ಶ್ರೀನಗರ ಕ್ರಾಸ್ ಬಳಿಯ ಚನ್ನಬಸವೇಶ್ವರ ನಗರದಲ್ಲಿನ ಹಲವು ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿದ ಪರಿಣಾಮ ಕೆಲ ಕಾಲ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಮನೆಗೆ ನೀರು ನುಗ್ಗಿದ್ದರಿಂದ ಮನೆಯಲ್ಲಿ ಕೆಲವು ಸರಕ ಸರಂಜಾಮುಗಳಿಗೆ ಹಾನಿಯುಂಟಾಗಿದೆ ಎಂದು ಸ್ಥಳೀಯರು ದೂರಿದರು. ಆ ಬಳಿಕ ಮನೆಯಲ್ಲಿ ಸಂಗ್ರಹವಾಗಿದ್ದ ನೀರನ್ನು ಹೊರ ಹಾಕಲು ಹರಸಾಹಸ ಪಡಬೇಕಾಯಿತು. ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ರಸ್ತೆಯಲ್ಲಿ ಜನ ಸಂಚಾರ ಮಾಡಲು ಕೂಡ ಪರದಾಡಿದ ದೃಶ್ಯ ಅಲ್ಲಲ್ಲಿ ಕಂಡು ಬಂದವು.