ಉರ್ದು ವಿದ್ಯಾರ್ಥಿಗಳು ಉನ್ನತ ಶಿಕ್ಷಣದತ್ತ ಗಮನಹರಿಸಲಿ : ಸಚಿವ ವಿನಯ ಕುಲಕರ್ಣಿ
Date : 2017-11-20 SHARE
ಧಾರವಾಡ : ಉರ್ದು ವಿದ್ಯಾರ್ಥಿಗಳು ಖುರಾನ್ ಓದಿದರೇ ಸಾಲದು, ಎಸ್.ಎಸ್.ಎಲ್.ಸಿ ನಂತರ ಉನ್ನತ ಶಿಕ್ಷಣದತ್ತ ಗಮನಹರಿಸಬೇಕು ಎಂದು ಗಣಿ, ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ನಗರದ ಶಿಕ್ಷಕಿಯರ ತರಬೇತಿ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಉರ್ದು ಮಾಧ್ಯಮದ “ಸ್ಕೋರಿಂಗ್ ಪ್ಯಾಕೇಜ್ ಪುಸ್ತಕಗಳು ಹಾಗೂ ಉರ್ದು ಪ್ರೌಢಶಾಲಾ ಸಹ ಶಿಕ್ಷಕರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ” ಉದ್ಘಾಟಿಸಿ ಅವರು ಮಾತನಾಡಿದರು. ವೈಶುದೀಪ್ ಫೌಂಡೇಶನ್ ಕಾರ್ಯದರ್ಶಿಗಳಾದ ಶಿವಲೀಲಾ ಕುಲಕರ್ಣಿ ಮಾತನಾಡಿ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಫೋನ್ ಇನ್ ಕಾರ್ಯಕ್ರಮ ಸಹಾಯಕವಾಗಿದೆ. ವಿದ್ಯಾರ್ಥಿಗಳು ಇದೇ ಬುಧವಾರದಂದು ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಫೋನ್ ಇನ್ ಕಾರ್ಯಕ್ರಮ ಆರಂಭವಾಗಲಿದೆ. ವಿದ್ಯಾರ್ಥಿಗಳು ಟೋಲ್ ಫ್ರೀ ನಂ.1800-4255540 ಕರೆ ಮಾಡಿ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರಿ ಉಪನಿರ್ದೇಶಕರಾದ ಎಮ್.ಎಲ್.ಹಂಚಾಟೆ, ಧಾರವಾಡ ಶಹರದ ಕ್ಷೇತ್ರಶಿಕ್ಷಣಾಧಿಕಾರಿ ಎಸ್.ಎಮ್.ಹುಡೇದಮನಿ, ಶ್ರೀಶೈಲ್ ಕರಿಕಟ್ಟಿ ಪ್ರೇರಣಾ ಸಮಿತಿಯ ಸದಸ್ಯ ವಿನಾಯಕ ಜೋಶಿ, ಬಸವರೆಡ್ಡಿ ಶಿಕ್ಷಣ ಸಂಸ್ಥೆಯ ಶಶಿಕಲಾ ಬಸವರೆಡ್ಡಿ, ಉರ್ದು ಶಿಕ್ಷಣ ಸಂಯೋಜಕರಾದ ಎ.ಕೆ.ಮುಜಾವರ ಉಪಸ್ಥಿತರಿದ್ದರು.